×
Ad

ರೇಣುಕಾಚಾರ್ಯರ ಮಾತನ್ನು ಸವಾಲಾಗಿ ಸ್ವೀಕರಿಸಿ ಗ್ರಾ.ಪಂ ಚುನಾವಣೆಗೆ ಸ್ಪರ್ಧಿಸಿ ಗೆದ್ದು ತೋರಿಸಿ: ಬಿ.ಎಲ್ ಸಂತೋಷ್ ಕಾಳೆಲೆದ ಕಾಂಗ್ರೆಸ್

Update: 2023-06-30 14:32 IST

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಜೆಪಿ ಹೀನಾಯ ಸೋಲು ಕಂಡ ಬಳಿಕ ಸ್ವಪಕ್ಷೀಯ ನಾಯಕರ ವಿರುದ್ಧವೇ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.

ಗ್ರಾಮ ಪಂಚಾಯತ್ ಚುನಾವಣೆ ಗೆಲ್ಲಲಾಗದವರು ನಮಗೆ ಮಾರ್ಗದರ್ಶನ ಮಾಡ್ತಿದ್ರು ಎಂಬ ರೇಣುಕಾಚಾಶರ್ಯರ ಹೇಳಿಕೆಯನ್ನು ಉಲ್ಲೇಖಿಸಿ ಬಿಜೆಪಿ ವಿರುದ್ಧ ವ್ಯಂಗ್ಯವಾಡಿರುವ ಕಾಂಗ್ರೆಸ್, 'ದುಡಿಯದೆ, ಬೆವರು ಹರಿಸದೆ, ತಿರುಗದೆ, ನಾಲ್ಕು ಮತವನ್ನು ಗಳಿಸುವ ಶಕ್ತಿಯೂ ಇಲ್ಲದ ಆ 'ಸಂಘ'ಟನಾ ಕಾರ್ಯದರ್ಶಿಯ ವಿರುದ್ಧ ಮಾತನಾಡಿದ ಒಬ್ಬೇ ಒಬ್ಬ ವ್ಯಕ್ತಿ ಅಂದರೆ ರೇಣುಕಾಚಾರ್ಯ. ಬಿಜೆಪಿಯಲ್ಲಿ ಅವರು ಬದುಕುಳಿಯಲು ಸಾಧ್ಯವೇ ಎಂದು ಕಾದು ನೋಡಬೇಕು' ಎಂದು ಹೇಳಿದೆ.

'ಬಿ.ಎಲ್ ಸಂತೋಷ್ ಅವರೇ, ರೇಣುಕಾಚಾರ್ಯರ ಈ ಮಾತನ್ನು ಸವಾಲಾಗಿ ಸ್ವೀಕರಿಸಿ ಮುಂದಿನ ಗ್ರಾಂ.ಪಂ ಚುನಾವಣೆಗೆ ಸ್ಪರ್ದಿಸಿ ಗೆದ್ದು ತೋರಿಸಿ! ನಿಮ್ಮ ದಮ್ಮು ತಾಕತ್ತು ನಿರೂಪಿಸಿ' ಎಂದು ಕಾಂಗ್ರೆಸ್ ಸಂತೋಷ್ ಅವರ ಕಾಳೆಲೆದಿದೆ.

ರೇಣುಕಾಚಾರ್ಯಗೆ ಬಿಜೆಪಿ ನೋಟಿಸ್:

ಪರೋಕ್ಷವಾಗಿ ಬಿಜೆಪಿ ನಾಯಕ ಬಿ.ಎಲ್.ಸಂತೋಷ್ ವಿರುದ್ಧ ವಾಗ್ದಾಳಿ ನಡೆಸಿದ ಹಿನ್ನೆಲೆ ಮಾಜಿ ಸಚಿವ ರೇಣುಕಾಚಾರ್ಯ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಬಿಜೆಪಿ ಶಿಸ್ತುಪಾಲನಾ ಸಮಿತಿಯಿಂದ ಕಾರಣಕೇಳಿ ನೋಟಿಸ್‌ ಜಾರಿಗೊಳಿಸಲಾಗಿದೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News