ಕಾಂಗ್ರೆಸ್ ಪಕ್ಷದಿಂದ ರಾಜೀವ್ ಗೌಡ ಅಮಾನತು
Update: 2026-01-23 20:42 IST
ರಾಜೀವ್ ಗೌಡ
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತರಾದ ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡನನ್ನು ಕಾಂಗ್ರೆಸ್ ಪಕ್ಷದಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಶುಕ್ರವಾರ ಈ ಸಂಬಂಧ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷರಾಗಿರುವ ಕೆ.ರೆಹ್ಮಾನ್ ಖಾನ್ ಅವರು ಆದೇಶ ಹೊರಡಿಸಿದ್ದು, ಶಿಡ್ಲಘಟ್ಟ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡ ವಿರುದ್ಧ ಬಂದಿರುವ ಆರೋಪವನ್ನು ಕೂಲಂಕುಷವಾಗಿ ಪರಿಶೀಲಿಸಲಾಗಿದೆ. ಪ್ರಕರಣದ ಗಂಭೀರತೆ ಮನವರಿಕೆಯಾದ ಹಿನ್ನಲೆಯಲ್ಲಿ ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯ ಶಿಫಾರಸ್ಸಿನ ಮೇರೆಗೆ ರಾಜೀವ್ ಗೌಡ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.