ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಪಟ್ಟಿ ಬಿಡುಗಡೆ: ವೀರಪ್ಪ ಮೊಯ್ಲಿ, ನಾಸಿರ್ ಹುಸೇನ್, ಬಿ.ಕೆ ಹರಿಪ್ರಸಾದ್ ಗೆ ಸ್ಥಾನ
Update: 2023-08-20 16:00 IST
ನಾಸಿರ್ ಹುಸೇನ್, ವೀರಪ್ಪ ಮೊಯ್ಲಿ, ಬಿ.ಕೆ ಹರಿಪ್ರಸಾದ್
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 39 ಸದಸ್ಯರುಳ್ಳ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು (ಸಿಡಬ್ಲ್ಯುಸಿ) ರಚಿಸಿದ್ದಾರೆ.
ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಡಾ. ಮನಮೋಹನ್ ಸಿಂಗ್ ಸೇರಿದಂತೆ ಸಚಿನ್ ಪೈಲಟ್, ಶಶಿ ತರೂರ್, ನಾಸಿರ್ ಹುಸೇನ್, ಅಲ್ಕಾ ಲಂಬಾ, ಸುಪ್ರಿಯಾ ಶ್ರೀನಾಟೆ, ಪ್ರಣಿತಿ ಶಿಂಧೆ- ಪವನ್ ಖೇರಾ, ಗಣೇಶ್ ಗೋಡಿಯಾಲ್, ಯಶೋಮತಿ ಠಾಕೂರ್ ಅವರು ಕಾರ್ಯಕಾರಿ ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ.
ಇನ್ನು ರಾಜ್ಯಸಭೆ ಸದಸ್ಯ ನಾಸಿರ್ ಹುಸೇನ್ ಅವರಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ವಿಶೇಷ ಆಹ್ವಾನಿತರ ಪಟ್ಟಿಯಲ್ಲಿ ಬಿ.ಕೆ ಹರಿಪ್ರಸಾದ್ ಮತ್ತು ವೀರಪ್ಪ ಮೊಯ್ಲಿ ಅವರಿಗೆ ಸ್ಥಾನ ನೀಡಲಾಗಿದೆ.