×
Ad

ಪೊಲೀಸ್ ಮಹಾ ನಿರ್ದೇಶಕರಾಗಿ ಅಲೋಕ್ ಮೋಹನ್ ಮುಂದುವರಿಕೆ

Update: 2023-08-05 22:27 IST

ಬೆಂಗಳೂರು, ಆ.5: ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಹೆಚ್ಚುವರಿ ಹೊಣೆ ಹೊಂದಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಮೋಹನ್ ಅವರನ್ನು ಅದೇ ಹುದ್ದೆಯಲ್ಲಿ ಮುಂದುವರೆಸಿ ರಾಜ್ಯ ಸರಕಾರ ಆದೇಶ ಪ್ರಕಟಿಸಿದೆ.

ಪ್ರವೀಣ್ ಸೂದ್‌ರಿಂದ ತೆರವಾದ ಸ್ಥಾನಕ್ಕೆ ಅಲೋಕ್ ಮೋಹನ್ ಅವರನ್ನು ರಾಜ್ಯ ಸರಕಾರ ಮೇ 21ರಂದು ನೇಮಕಗೊಳಿಸಿತ್ತು. ಅಗ್ನಿಶಾಮಕ ಮತ್ತು ತುರ್ತು ಸೇವೆ ಹಾಗೂ ಗೃಹರಕ್ಷಕ ದಳದ ಡಿಜಿಯಾಗಿದ್ದ ಅಲೋಕ್ ಮೋಹನ್ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಹೆಚ್ಚುವರಿ ಹೊಣೆಗಾರಿಕೆ ಹೊತ್ತಿದ್ದರು. ಪ್ರಸ್ತುತ ಅಗ್ನಿಶಾಮಕ ಮತ್ತು ತುರ್ತು ಸೇವೆ ಹಾಗೂ ಗೃಹರಕ್ಷಕ ದಳದ ಡಿಜಿ ಸ್ಥಾನದಿಂದ ಬಿಡುಗಡೆಗೊಳಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ (ಡಿಜಿ/ಐಜಿಪಿ) ಸ್ಥಾನದಲ್ಲಿ ಮುಂದುವರಿಕೆ ಮಾಡಿ ರಾಜ್ಯ ಸರಕಾರ ಆದೇಶ ಪ್ರಕಟಿಸಿದೆ.

ಮೇ 22 ರಂದು ಅಧಿಕಾರ ವಹಿಸಿಕೊಂಡಿದ್ದ ಅಲೋಕ್ ಮೋಹನ್: ಸೇವಾ ಹಿರಿತನದ ಆಧಾರದ ಮೇಲೆ 87ನೇ ಬ್ಯಾಚ್‌ನ ಅಧಿಕಾರಿ ಹಾಗೂ ರಾಜ್ಯ ಅಗ್ನಿಶಾಮಕ ದಳ ಮತ್ತು ಗೃಹ ರಕ್ಷಕದಳದ ಮುಖ್ಯಸ್ಥರಾಗಿದ್ದ ಅಲೋಕ್ ಮೋಹನ್ ಅವರನ್ನು ರಾಜ್ಯ ಪೊಲೀಸ್ ಡಿಜಿ ಮತ್ತು ಐಜಿಪಿಯಾಗಿ ಆಯ್ಕೆ ಮಾಡಲಾಗಿತ್ತು. ಮೇ 22 ರಂದು ಇವರು ಅಧಿಕಾರ ವಹಿಸಿಕೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News