LIVE | ಗ್ಯಾರಂಟಿ ಯೋಜನೆಗಳು ಸಾಮಾಜಿಕ ಕಳಕಳಿಯಲ್ಲಿನ ಹೂಡಿಕೆಗಳು : ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು 16ನೇ ಬಾರಿಗೆ ಬಜೆಟ್ ಮಂಡಿಸಲಿದ್ದು, ಬೆಳಿಗ್ಗೆ 10.15ಕ್ಕೆ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆಯನ್ನು ಪ್ರಾರಂಭಿಸಲಿದ್ದಾರೆ. ಆ ಮೂಲಕ ತಮ್ಮದೇ ದಾಖಲೆಯನ್ನು ಮುರಿಯಲಿದ್ದಾರೆ.
ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಕಾರ್ಯದರ್ಶಿ ಪಿ.ಸಿ. ಜಾಫರ್ ಬಜೆಟ್ ಪ್ರತಿ ಇರುವ ಸೂಟ್ ಕೇಸ್ ಅನ್ನು ಸಿಎಂ ಗೆ ಹಸ್ತಾಂತರಿಸಿದರು. ಈ ವೇಳೆ ಮುಖ್ಯಮಂತ್ರಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ .ಕೆ. ಅತೀಕ್ , ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಉಪಸ್ಥಿತರಿದ್ದರು.
ಕಳೆದ ಬಾರಿ ಸಿಎಂ 3.71 ಲಕ್ಷ ರೂ. ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದರು. ಈ ಬಾರಿ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ. ಗೆ ಏರಿಕೆಯಾಗಲಿದೆ ಎನ್ನಲಾಗಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿರುವ ಅವರು, ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ನಾನು ಕೃತಜ್ಞ.
ಬುದ್ಧ, ಬಸವ, ಗಾಂಧಿ, ಅಂಬೇಡ್ಕರರ ಆಶಯಗಳಲ್ಲಿ ನಂಬಿಕೆಯನ್ನಿಟ್ಟು, ಅದರಂತೆ ನಡೆಯುತ್ತಿರುವ ನಾವು ಈ ಬಜೆಟ್ ಮೂಲಕ ಸಮಸಮಾಜದ ಕನಸನ್ನು ನನಸಾಗಿಸುವತ್ತ ಮತ್ತಷ್ಟು ದೃಢಹೆಜ್ಜೆಯನ್ನಿಡುವ ಪ್ರಯತ್ನ ಮಾಡಿದ್ದೇವೆ. ಮುಂದಿನ ಒಂದು ವರ್ಷಗಳ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರಿದೀಪವಾಗಲಿದೆ ಎಂಬುದು ನಿಸ್ಸಂಶಯ ಎದು ಹೇಳಿದ್ದಾರೆ.
3 ಗಂಟೆ 25 ನಿಮಿಷಗಳ ಸುದೀರ್ಘ ಅವಧಿಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ
ವೃತ್ತಿ ತೆರಿಗೆ ಪಾವತಿಯಲ್ಲಿ 100. ರೂ ಹೆಚ್ಚಳ. 200 ರಿಂದ 300 ರೂ.ಗೆ ಏರಿಕೆ
ಮೈಸೂರಿನ ರಂಗಾಯಣ ಚಟುವಟಿಕೆಗೆ 2 ಕೋಟಿ ರೂ. ಅನುದಾನ
ನೂತನ ಮರಳುಗಾರಿಕಾ ನೀತಿ ಪ್ರಾರಂಭ
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ವಾಟರ್ ಮೆಟ್ರೋ ಪ್ರಾರಂಭಕ್ಕೆ ಯೋಜನೆ
ಬಜೆಟ್ ಮಂಡನೆ ಸಂದರ್ಭದಲ್ಲಿ ವಿಧಾನಸಭೆ ವೀಕ್ಷಕರ ಗ್ಯಾಲರಿಯಲ್ಲಿ ಒಳಮೀಸಲಾತಿಗಾಗಿ ಇಬ್ಬರು ವೀಕ್ಷಕರು ಘೋಷಣೆ ಕೂಗಿದ ಪ್ರಸಂಗ ನಡೆಯಿತು. ಕೂಡಲೇ ವಿಧಾನಸಭೆ ಮಾರ್ಷಲ್ ಗಳು ಅವರನ್ನು ವಶಕ್ಕೆ ಪಡೆದುಕೊಂಡರು.
ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರ ರಚನೆ
ಗೃಹ ಲಕ್ಷ್ಮೀ ಯಜಮಾನಿಯರನ್ನು ಸ್ವಸಹಾಯ ಗುಂಪುಗಳ ಸದಸ್ಯರುಗಳನ್ನಾಗಿಸಿ ರಾಜ್ಯ ಮಟ್ಟದ ಅಕ್ಕ ಕೋ ಆಪರೇಟಿವ್ ಸೊಸೈಟಿ ವ್ಯಾಪ್ತಿಗೆ ತರಲಾಗುವುದು
IAS IPS KAS ಪರೀಕ್ಷೆ ಗಳಿಗೆ ವಸತಿ ಸಹಿತ ತರಬೇತಿ ಗೆ ಬೆಂಗಳೂರು ನಗರದಲ್ಲಿ ಸುಸಜ್ಜಿತ ವಸತಿ ವ್ಯವಸ್ಥೆ
ನನ್ನ ವೃತ್ತಿ ನನ್ನ ಆಯ್ಕೆ ಸರ್ಕಾರಿ ಶಾಲಾ ಕಾಲೇಜುಗಳಲ್ಲಿನ 2.30 ಲಕ್ಷ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ