×
Ad

ಕೋವಿಡ್ ಹಗರಣ | ತನಿಖೆಯ ಹೊಣೆಯನ್ನು ಸಿಐಡಿಗೆ ವಹಿಸಿದ ರಾಜ್ಯ ಸರಕಾರ

Update: 2025-02-14 15:01 IST

ಸಾಂದರ್ಭಿಕ ಚಿತ್ರ (PTI)

ಬೆಂಗಳೂರು : ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭ ಕೋವಿಡ್-19 ಸೋಂಕಿನ ಚಿಕಿತ್ಸೆಯ ಹೆಸರಿನಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆಯ ಜವಾಬ್ದಾರಿಯನ್ನು ರಾಜ್ಯ ಸರಕಾರ ಸಿಐಡಿಗೆ ವಹಿಸಿದೆ.

ಸಿಐಡಿ ಎಸ್‌.ಪಿ.ರಾಘವೇಂದ್ರ ಹೆಗಡೆ, ಮೂವರು ಡಿವೈಎಸ್ಪಿಗಳನ್ನು ಒಳಗೊಂಡ ತಂಡವು ಕೋವಿಡ್‌ ಹಗರಣದ ತನಿಖೆ ನಡೆಸಲಿದೆ. ಡಿ.13ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಆದರೆ ಈ ಎಫ್ಐಆರ್ ದಾಖಲಾದ 2 ತಿಂಗಳ ಬಳಿಕ ಸಿಐಡಿ ತನಿಖೆಗೆ ರಾಜ್ಯ ಸರಕಾರ ಆದೇಶಿಸಿದೆ.

ಕೋವಿಡ್ ಹರಣದ ತನಿಖೆಗೆ ಎಸ್‌ಐಟಿ ರಚಿಸುವ ಕುರಿತು ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು. ಆದರೆ ಹಗರಣದಲ್ಲಿ ಪ್ರಭಾವಿ ರಾಜಕಾರಣಿಗಳು ಹಾಗೂ ಐಎಎಸ್ ಅಧಿಕಾರಿಗಳ ಹೆಸರು ಪ್ರಸ್ತಾಪವಾಗಿರುವುದರಿಂದ ವಿಶೇಷ ತನಿಖಾ ತಂಡದ(ಎಸ್‌ಐಟಿ) ನೇತೃತ್ವ ವಹಿಸಲು ಐಪಿಎಸ್ ಅಧಿಕಾರಿಗಳು ಹಿಂದೇಟು ಹಾಕಿದ್ದರು. ಹೀಗಾಗಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News