×
Ad

ಡಿಸಿಎಂ ಡಿಕೆಶಿ ನಿವಾಸದಲ್ಲಿ ಸಿ.ಪಿ.ಯೋಗೇಶ್ವರ್ ಪ್ರತ್ಯಕ್ಷ: ಕಾಂಗ್ರೆಸ್ ಸೇರ್ಪಡೆ ನಿಶ್ಚಿತ

Update: 2024-10-23 09:57 IST

PC | Twitter

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಕಣ ರಂಗೇರುತ್ತಿದ್ದು, ಬಿಜೆಪಿ ಟಿಕೆಟ್ ಆಕಾಂಕ್ಷಿ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ದಟ್ಟವಾಗಿದೆ.

ಇದಕ್ಕೆ ಪುಷ್ಟಿ ನೀಡುವಂತೆ ಯೋಗೇಶ್ವರ್ ಅವರು ಇಂದು ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಿವಾಸದಲ್ಲಿ ಕಾಣಿಸಿಕೊಂಡಿದ್ದಾರೆ. ಬಳಿಕ ಅವರಿಬ್ಬರು ಒಂದೇ ಕಾರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದತ್ತ ಹೊರಟಿದ್ದಾರೆ.

ಮುಖ್ಯಮಂತ್ರಿಯ ಭೇಟಿಯ ಬಳಿಕ ಯೋಗೇಶ್ವರ್ ಕಾಂಗ್ರೆಸ್ ಸೇರುವ ಸಾಧ್ಯತೆಯಿದ್ದು, ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅ.24ರಂದೇ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಚುನಾವಣೆಯಲ್ಲಿ ಸ್ಪರ್ಧಿಸಲೇಬೇಕೆಂಬ ಹಟಕ್ಕೆ ಬಿದ್ದಿರುವ ಯೋಗೇಶ್ವರ್, ಪರಿಷತ್ ನ ಬಿಜೆಪಿ ಸದಸ್ಯ ಸ್ಥಾನಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News