×
Ad

ಸಿ.ಪಿ.ಯೋಗೇಶ್ವರ್ ಬಿಜೆಪಿಗೆ ರಾಜೀನಾಮೆ: ಇಂದೇ ಕಾಂಗ್ರೆಸ್ ಸೇರ್ಪಡೆ

Update: 2024-10-23 11:12 IST

ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಇಂದು ಬೆಳಗ್ಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಯೋಗೇಶ್ವರ್ ಅವರು ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರಿಗೆ ವಾಟ್ಸ್ ಆ್ಯಪ್ ಮೂಲಕ ಕಳುಹಿಸಿದ್ದಾರೆ.

ಯೋಗೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಇಂದು ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ.

ಯೋಗೇಶ್ವರ್ ಇಂದು ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಬಳಿಕ ಅಲ್ಲಿಂದ ಡಿಕೆಶಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು. ಅದರ ಬೆನ್ನಲ್ಲೇ ಅವರು ಬಿಜೆಪಿ ರಾಜ್ಯಾಧ್ಯಕ್ಷರಿಗೆ ತನ್ನ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿಯಿಂದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಪಕ್ಷ ಟಿಕೆಟ್ ಘೋಷಿಸುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವುದರಿಂದ ಬೇಸತ್ತಿದ್ದರು.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News