ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ CWRC ಆದೇಶ
Update: 2026-08-11 15:57 IST
ಬೆಂಗಳೂರು : ತಮಿಳುನಾಡಿಗೆ ಮುಂದಿನ 15 ದಿನಗಳವರೆಗೆ ಪ್ರತಿನಿತ್ಯ 12 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲುಆರ್ಸಿ) ಇಂದು ಆದೇಶಿಸಿದೆ.
ಕಾವೇರಿ ನೀರು ನಿಯಂತ್ರಣ ಸಮಿತಿಯು ಇಂದಿನ ಸಭೆಯಲ್ಲಿ ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳ ವಾದವನ್ನು ಆಲಿಸಿತು. ಈ ಸಂದರ್ಭದಲ್ಲಿ ಕರ್ನಾಟಕವು ಮಳೆ ಪರಿಸ್ಥಿತಿ ಮತ್ತು ಕಾವೇರಿ ಜಲಾಶಯಗಳಲ್ಲಿನ ನೀರಿನ ಸಂಗ್ರಹ ಹಾಗೂ ಬರಗಾಲದ ಬಗ್ಗೆ ವಿವರಿಸಿದೆ. ಆದರೆ 12 ಸಾವಿರ ಕ್ಯುಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ರಾಜ್ಯ ಸರಕಾರಕ್ಕೆ ಶಿಫಾರಸು ಮಾಡಿದೆ.
ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯೂ ನಡೆಯಲಿದ್ದು, ಕರ್ನಾಟಕ ಸರಕಾರ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿದ ಆದೇಶವನ್ನು ಪ್ರಶ್ನಿಸಲಿದೆ.