ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿ.ಹನುಮಂತಯ್ಯ ಅವಿರೋಧ ಆಯ್ಕೆ
Update: 2023-07-27 19:48 IST
ಬೆಂಗಳೂರು, ಜು. 27: ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಆಯ್ಕೆಗಾಗಿ ಗುರುವಾರ ನಡೆದ ಚುನಾವಣೆಯಲ್ಲಿ ಸಂಘದ ಅಧ್ಯಕ್ಷರಾಗಿ ಬಿಡಿಸಿಸಿ ಬ್ಯಾಂಕ್‍ನ ಮಾಜಿ ಅಧ್ಯಕ್ಷ ಡಿ.ಹನುಮಂತಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ಮಾಜಿ ಅಧ್ಯಕ್ಷ ಬಿ.ಕೆಂಚಪ್ಪಗೌಡ ಗೌರವಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಸಂಘದ ನಿರ್ದೇಶಕ ಎಚ್.ಎನ್.ಅಶೋಕ(ತಮ್ಮಾಜಿ) ಸಭಾ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಪದಾಧಿಕಾರಿಗಳ ಆಯ್ಕೆಯ ಚುನಾವಣೆಯಲ್ಲಿ ಡಿ.ಹನುಮಂತಯ್ಯ ಸಂಘದ ಅಧ್ಯಕ್ಷರಾಗಿ, ಎಲ್.ಶ್ರೀನಿವಾಸ್ ಹಾಗೂ ಸಿ.ದೇವರಾಜು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಎಚ್.ಸಿ.ಜಯಮುತ್ತು ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಸಹಾಯಕ ಕಾರ್ಯದರ್ಶಿಯಾಗಿ ವೆಂಕಟರಾಮೇಗೌಡ ಮತ್ತು ಖಚಾಂಚಿಯಾಗಿ ಸಿ.ಎಂ.ಮಾರೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಪ್ರಕಟನೆ ತಿಳಿಸಿದೆ.