×
Ad

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವರ್ಗಾವಣೆ: ದರ್ಶನ್ ಎಚ್‌ವಿ ನೂತನ ಡಿಸಿ

Update: 2025-06-17 21:53 IST

ದರ್ಶನ್ ಎಚ್‌ವಿ/ ಮುಲ್ಲೈ ಮುಗಿಲನ್‌

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ ದರ್ಶನ್ ಎಚ್ ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.

ಮುಲ್ಲೈ ಮುಗಿಲನ್ ಅವರನ್ನು ಇನ್ಸ್‌ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಆಂಡ್ ಸ್ಟಾಂಪ್ಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿರುವ ದರ್ಶನ್ ಎಚ್‌ವಿ ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News