ದಲಿತ ಯುವಕನಿಗೆ ಮರಕ್ಕೆ ಕಟ್ಟಿಹಾಕಿ ಹಲ್ಲೆ; ಪ್ರಕರಣ ದಾಖಲು
Update: 2023-10-22 16:10 IST
ಕಲಬುರಗಿ: ಹೊಲಕ್ಕೆ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಸವರ್ಣೀಯರು ದಲಿತ ಯುವಕನನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ಮಾಡಿದ ಘಟನೆ ತಾಲ್ಲೂಕಿನ ಯಡ್ರಾಮಿ ತಾಲ್ಲೂಕಿನ ಮಳ್ಳಿ ಗ್ರಾಮದಲ್ಲಿ ನಡೆದಿದೆ.
ಹಲ್ಲೆಗೊಳಗಾದ ಯುವಕನನ್ನು ಕಿರಣ ಎಂದು ಗುರುತಿಸಲಾಗಿದೆ. ಆರೋಪಿಗಳಾದ ಮಂಜು ಮತ್ತು ಸಹೋದರರು ಸೇರಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಸಂತ್ರಸ್ತನ ಕುಟುಂಬಸ್ಥರು ಯಡ್ರಾಮಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸದ್ಯ ಯುವಕ ವಿಜಯಪುರದ ಬಿಎಲ್ ಡಿಇ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ.