×
Ad

ರಾಜ್ಯದ ಹಲವೆಡೆ ಮಳೆಯಿಂದ ಹಾನಿ: ಮುಖ್ಯ ಕಾರ್ಯದರ್ಶಿಯಿಂದ ವರದಿ ಕೇಳಿದ ಸಿಎಂ ಸಿದ್ದರಾಮಯ್ಯ

Update: 2023-07-24 20:30 IST

ಬೆಂಗಳೂರು, ಜು. 24: ರಾಜ್ಯದ ಹಲವೆಡೆ ಮುಂಗಾರು ಮಳೆ ಅಬ್ಬರಿಸುತ್ತಿದೆ. ಅದೇ ಮತ್ತೊಂದೆಡೆ ಹಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ರೈತರು, ಜನ, ಜಾನುವಾರುಗಳು ಸಂಕಷ್ಟದಲ್ಲಿವೆ. ಈ ಹಿನ್ನೆಲೆಯಲ್ಲಿ ಪ್ರಸಕ್ತ ಪರಿಸ್ಥಿತಿ ಕುರಿತು ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಆರಂಭದಲ್ಲಿ ಕ್ಷೀಣಿಸಿದ್ದ ಮುಂಗಾರು ಮಳೆ ಇದೀಗ ಹಲವೆಡೆ ಚುರುಕಾಗಿದೆ. ಯಾವ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿಯಾಗಿದೆ. ಯಾವ ಜಿಲ್ಲೆಗಳಲ್ಲಿ ಮಳೆ ಇಲ್ಲದೆ ತೊಂದರೆಯಾಗಿದೆ ಎಂಬುದರ ಕುರಿತು ವರದಿ ನೀಡುವಂತೆ ಮುಖ್ಯಮಂತ್ರಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News