×
Ad

ಕೃಷಿ ಇಲಾಖೆಯ ರಾಯಭಾರಿಯಾಗಿ ದರ್ಶನ್ ಮುಂದುವರಿಸಲು ಸಾಧ್ಯವಿಲ್ಲ : ಎಂ.ಬಿ.ಪಾಟೀಲ್

Update: 2024-06-14 17:13 IST

ದರ್ಶನ್/ಎಂ.ಬಿ.ಪಾಟೀಲ್

ಹುಬ್ಬಳ್ಳಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಸ್ಯಾಂಡಲ್‌ವುಡ್‌ ನಟ ದರ್ಶನ್ ಅವರನ್ನು ಕೃಷಿ ರಾಯಭಾರಿಯಾಗಿ ಮುಂದುವರಿಸಲು ಸಾಧ್ಯವಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಶುಕ್ರವಾರ ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಬಂಧಿತರಾಗಿರುವ ನಟ ದರ್ಶನ್‌ಗೆ ಯಾವುದೇ ವಿಐಪಿ ಸೌಕರ್ಯ ನೀಡಿಲ್ಲ. ಅವರ ಮೇಲಿರುವ ಆರೋಪ ಸಾಬೀತಾದರೆ ಶಿಕ್ಷೆಯಾಗುತ್ತದೆ‌ ಎಂದು ಹೇಳಿದರು.

ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ : ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಬಂಧನಕ್ಕೆ  ವಾರೆಂಟ್ ಹೊರಡಿಸಲು ನ್ಯಾಯಾಲಯ ಆದೇಶಿಸಿದೆ. ಪೋಕ್ಸೊ ಪ್ರಕರಣ ಅತ್ಯಂತ ಗಂಭೀರವಾದದ್ದು, ಇದರಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವ, ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News