×
Ad

ರೇಣುಕಾಸ್ವಾಮಿ ಹತ್ಯೆ ಪ್ರಕರಣ | ಚಾರ್ಜ್ ಶೀಟ್ ವಿವರಗಳ ಮಾಧ್ಯಮ ಪ್ರಸಾರಕ್ಕೆ ನಿರ್ಬಂಧ ಕೋರಿ ದರ್ಶನ್ ಹೈಕೋರ್ಟ್ ಮೊರೆ

Update: 2024-09-09 13:33 IST

ನಟ ದರ್ಶನ್(ಎಡಚಿತ್ರ), ರೇಣುಕಸ್ವಾಮಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ತಮ್ಮ ವಿರುದ್ಧ ಕೋರ್ಟ್‌ಗಡ ಸಲ್ಲಿಕೆಯಾಗಿರುವ ಚಾರ್ಜ್ ಶೀಟ್ ನ ಗೌಪ್ಯತೆ ಕಾಪಾಡಲು, ಅದರಲ್ಲಿ ವಿವರಗಳು ಮಾಧ್ಯಮದಲ್ಲಿ ಪ್ರಸಾರ ಆಗದಂತೆ ನಿರ್ಬಂಧ ಕೋರಿ ನಟ ದರ್ಶನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾಗಿರುವ ವಿಚಾರಗಳ ಬಗ್ಗೆ ಮಾಧ್ಯಮಗಳು ಇಂಚಿಂಚೂ ಬಿಡದೇ ವರದಿ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಚಾರ್ಜ್ ಶೀಟ್ ವಿವರದ ಪ್ರಸಾರಕ್ಕೆ ನಿರ್ಬಂಧ ವಿಧಿಸುವಂತೆ ದರ್ಶನ್ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ದರ್ಶನ್ ಪರ ವಕೀಲರು ಈ ವಿಚಾರದಲ್ಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ 17 ಜನರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ ಆಗಿದೆ. ಚಾರ್ಜ್‌ಶೀಟ್‌ ನಲ್ಲಿ ದರ್ಶನ್ ಏನು ಮಾಡಿದ್ದರು ಎಂಬ ಬಗ್ಗೆ ಮಾಹಿತಿ ಇದೆ. ರೇಣುಕಾಸ್ವಾಮಿಗೆ ಕೊಟ್ಟ ಚಿತ್ರಹಿಂಸೆಗಳ ಬಗ್ಗೆ ಅಲ್ಲಿ ವಿವರಣೆ ನೀಡಲಾಗಿತ್ತು. ಆ ವಿವರಗಳ ಪ್ರಸಾರದ ಮೇಲೆ ನಿರ್ಬಂಧ ಹೇರುವಂತೆ ದರ್ಶನ್ ಕೋರಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News