×
Ad

ದಾವಣಗೆರೆ: ಜಿಲ್ಲಾ ಕಾಂಗ್ರೆಸ್‍ನಿಂದ 77ನೇ ಸ್ವಾತಂತ್ರ್ಯೋತ್ಸವ ಆಚರಣೆ

Update: 2023-08-15 22:31 IST

ದಾವಣಗೆರೆ : ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ (ಡಾ. ಶಾಮನೂರು ಶಿವಶಂಕರಪ್ಪ ಭವನ) 77ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಹೆಚ್.ಬಿ.ಮಂಜಪ್ಪನವರು ಧ್ವಜಾರೋಹಣ ನೇರವೇರಿಸಿ ಮಾತನಾಡಿ ಮಹಾತ್ಮ ಗಾಂಧೀಜಿಯವರು, ಪಂಡಿತ್ ಜವಹರ್ ಲಾಲ್ ನೆಹರು, ಅಬ್ದುಲ್ ಕಲಾಂ ಆಜಾದ್ ಸೇರಿದಂತೆ ಹಲವರ ಹೋರಾಟದ ಫಲವಾಗಿ 1947ರ ಈ ದಿನದಂದು ನಮಗೆ ಸ್ವಾತಂತ್ರ್ಯ ದೊರೆಯಿತು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್.ಕೆ.ಶೆಟ್ಟಿ, ಎಸ್.ಮಲ್ಲಿಕಾರ್ಜುನ್, ಮುದೇಗೌಡ್ರು ಗಿರೀಶ್, ಎಸ್.ಎಲ್. ಆನಂದಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ.ಶಿವಕುಮಾರ್, ಅಯೂಬ್ ಪೈಲ್ವಾನ್, ಜಿ.ಸಿ.ನಿಂಗಪ್ಪ, ಸೇವಾದಳದ ಡೋಲಿ ಚಂದ್ರು, ಮಹಾನಗರ ಪಾಲಿಕೆ ಸದಸ್ಯ ಎ.ನಾಗರಾಜ್, ರಾಘವೇಂದ್ರ ನಾಯ್ಕ, ಮಹಿಳಾ ಕಾಂಗ್ರೆಸ್‍ನ ಅನಿತಾಬಾಯಿ ಜಾಧವ್, ಮಂಜಮ್ಮ, ಕವಿತಾ ಚಂದ್ರಶೇಖರ್, ರಾಮಚಂದ್ರಪ್ಪ, ಮತ್ತಿತರರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News