×
Ad

ಏಳು ದಿನಗಳ ಅಮೆರಿಕಾ ಪ್ರವಾಸ ಕೈಗೊಳ್ಳಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್

Update: 2024-09-08 18:55 IST

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಏಳು ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ.

ರವಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಖುದ್ದು ಭೇಟಿ ಮಾಡಿದ ಡಿ.ಕೆ.ಶಿವಕುಮಾರ್ ಅವರು ತಮ ವಿದೇಶಿ ಪ್ರವಾಸದ ಬಗ್ಗೆ ಮಾಹಿತಿ ನೀಡಿದ್ದಾರೆ. ಅಮೆರಿಕದಲ್ಲಿ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಅಧ್ಯಕ್ಷೀಯ ಸ್ಥಾನಕ್ಕೆ ಸ್ಪರ್ಧಿಸಿರುವ ಕಮಲಾ ಹ್ಯಾರಿಸ್ ಆಹ್ವಾನದ ಮೇರೆಗೆ ಡಿ.ಕೆ.ಶಿವಕುಮಾರ್ ಖಾಸಗಿ ಹಾಗೂ ರಾಜತಾಂತ್ರಿಕ ಸಮಾವೇಶದಲ್ಲಿ ಭಾಗವಹಿಸಲು ಅಮೆರಿಕಕ್ಕೆ ತೆರಳುತ್ತಿದ್ದಾರೆ.

ಕಮಲಾ ಹ್ಯಾರಿಸ್ ಅವರು ‘ಪ್ರಜಾಪ್ರಭುತ್ವ ಮತ್ತು ಚುನಾವಣೆ’ ಕುರಿತ ಸಂವಾದವನ್ನು ಆಯೋಜಿಸಿದ್ದು, ಅದರಲ್ಲಿ ಭಾಗವಹಿಸಲು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಸೇರಿದಂತೆ ಹಲವರನ್ನು ಆಹ್ವಾನಿಸಿದ್ದು, ಆ ಪೈಕಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಆಹ್ವಾನಿತರಾಗಿದ್ದಾರೆ ಎಂದು ಹೇಳಲಾಗಿದೆ.

ಈ ಸಮಾವೇಶದಲ್ಲಿ ಚುನಾವಣೆ ವ್ಯವಸ್ಥೆ ಮತ್ತು ರಾಜಕೀಯದ ಕುರಿತು ಚರ್ಚೆಗಳಾಗಲಿವೆ. ಈ ವೇಳೆ ಡಿ.ಕೆ.ಶಿವಕುಮಾರ್, ಬರಾಕ್ ಒಬಾಮ ಅವರನ್ನು ಭೇಟಿಯಾಗಲಿದ್ದಾರೆ. ಅನಂತರ ಚಿಕಾಗೋ ಪ್ರವಾಸ ಕೈಗೊಂಡು ಡಿ.ಕೆ.ಶಿವಕುಮಾರ್ ಬಂಡವಾಳ ಆಕರ್ಷಣೆ ಬಗ್ಗೆ ಕೈಗಾರಿಕೋದ್ಯಮಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News