×
Ad

ಕಾವೇರಿ ವಿಚಾರವಾಗಿ ಕಾನೂನು ತಜ್ಞರ ಜತೆ ಚರ್ಚೆ : ಡಿಸಿಎಂ ಡಿ.ಕೆ.ಶಿವಕುಮಾರ್

Update: 2024-07-12 14:12 IST

Photo : x/@DKShivakumar

ಬೆಂಗಳೂರು : “ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕಾನೂನು ತಜ್ಞರ ಜತೆ ಚರ್ಚೆ ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಪ್ರಾಧಿಕಾರದ ತೀರ್ಮಾನದ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕಾವೇರಿ ನೀರಿನ ವಿಚಾರವಾಗಿ ಮುಂದೆ ಏನು ಮಾಡಬೇಕು ಎಂದು ಅನಿಲ್ ದಿವಾನ್, ಕಾತರಕಿ ಸೇರಿದಂತೆ ಕಾನೂನು ತಜ್ಞರ ತಂಡದ ಜತೆ ಚರ್ಚೆ ಮಾಡಿದ್ದು, ನೀರಾವರಿ ಇಲಾಖೆ ಅಧಿಕಾರಿಗಳ ಜತೆ ಮಾತುಕತೆ ನಡೆಸುತ್ತೇವೆ” ಎಂದು ತಿಳಿಸಿದರು.

ಮುಡಾ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ :

ಮೂಡಾ ಹಗರಣ ಸಂಬಂಧ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಅವರ ಆರೋಪದಲ್ಲಿ ಹುರುಳಿಲ್ಲ. ಸಮಯ ಬಂದಾಗ ನಾವು ಏನು ಉತ್ತರ ನೀಡಬೇಕೋ ನೀಡುತ್ತೇವೆ. ಮುಡಾದಲ್ಲಿ ಏನೇ ಹಗರಣ ನಡೆದಿದ್ದರೂ ಅದು ಬಿಜೆಪಿ ಅವಧಿಯಲ್ಲಿ ನಡೆದಿದೆ. ಈ ರಾಜಕೀಯ ಆರೋಪಗಳನ್ನು ನಾವು ಸಮರ್ಥವಾಗಿ ಎದುರಿಸುತ್ತೇವೆ” ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News