ಪ್ರತಿ ಜಿಲ್ಲೆಯಲ್ಲಿ ತಲಾ 50 ಸಾವಿರ ನಿವೇಶನ ಹಂಚಿಕೆ : ಡಿಸಿಎಂ ಡಾ.ಜಿ.ಪರಮೇಶ್ವರ್

"ಸರಕಾರಿ ಜಮೀನುಗಳನ್ನು ಗುರುತಿಸಿ, ನಿವೇಶನ ರಚನೆಗೆ ಸೂಚನೆ"

Update: 2026-08-17 21:59 IST

ಬೆಂಗಳೂರು : ನಮ್ಮ ಸರಕಾರಿ ಅಧಿಕಾರಕ್ಕೆ ಬರುವ ಮುನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಪ್ರತಿ ಜಿಲ್ಲೆಯಲ್ಲಿ ತಲಾ 50ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಉದ್ದೇಶಿಸಿದ್ದು, ಗ್ರಾಮೀಣ ಪ್ರದೇಶಗಳಲ್ಲಿ 30x40 ಅಳತೆಯ ಹಾಗೂ ನಗರ ಪ್ರದೇಶಗಳಲ್ಲಿ 20x30 ಅಳತೆಯ ನಿವೇಶನಗಳನ್ನು ಸಿದ್ಧಪಡಿಸಿ ಅರ್ಹರಿಗೆ ಒದಗಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಸೋಮವಾರ ಕಂದಾಯ ಇಲಾಖೆ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ಈ ನಿಟ್ಟಿನಲ್ಲಿ ಲಭ್ಯವಿರುವ ಹಾಗೂ ಖಾಲಿ ಇರುವ ಸರಕಾರಿ ಜಮೀನುಗಳನ್ನು ತಕ್ಷಣವೇ ಗುರುತಿಸಿ, ನಿವೇಶನಗಳ ರಚನೆಗೆ ಅಗತ್ಯವಿರುವ ಎಲ್ಲ ಪ್ರಕ್ರಿಯೆಗಳನ್ನು ಯಾವುದೇ ವಿಳಂಬಕ್ಕೆ ಆಸ್ಪದೆ ನೀಡದೆ ತುರ್ತಾಗಿ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.

ನಾವು ಕೊಟ್ಟ ಮಾತಿಗೆ ಬದ್ಧರಾಗಿ, ಪ್ರಣಾಳಿಕೆಯ ಘೋಷಣೆಗಳನ್ನು ಕಾರ್ಯರೂಪಕ್ಕೆ ತಂದು ನುಡಿದಂತೆ ನಡೆಯುತ್ತಿದ್ದೇವೆ. ಸರ್ವರಿಗೂ ಸ್ವಂತ ಸೂರಿನ ಭಾಗ್ಯವನ್ನು ನೀಡಿ, ಎಲ್ಲರೂ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ನಮ್ಮ ಆಶಯ ಎಂದು ಡಾ.ಪರಮೇಶ್ವರ್ ತಿಳಿಸಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News