×
Ad

ವೈದ್ಯರ ಸುರಕ್ಷತಾ ಕ್ರಮಗಳ ಕುರಿತು ವರದಿ ನೀಡಲು ಕಾರ್ಯಪಡೆ ರಚನೆ : ದಿನೇಶ್ ಗುಂಡೂರಾವ್

Update: 2024-08-20 20:57 IST

PC : x/@dineshgrao

ಬೆಂಗಳೂರು : ರಾಜ್ಯದ ವೈದ್ಯರ ಸುರಕ್ಷತೆ ಸಂಬಂಧ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿ ನೀಡಲು ಕಾರ್ಯಪಡೆ ರಚಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗಳವಾರ ವಿಧಾನ ಸೌಧದಲ್ಲಿ ವೈದ್ಯಕೀಯ ಸಂಘಟನಗಳ ಪ್ರತಿನಿಧಿಗಳು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ವೈದ್ಯಕೀಯ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಕಾರ್ಯನಿರ್ವಹಿಸುತ್ತಿದ್ದು, ಅವರ ಸುರಕ್ಷೆಗೆ ಅಗತ್ಯ ಕ್ರಮಗಳನ್ನ ಕೈಗೊಳ್ಳಲು ಸರಕಾರ ಬದ್ಧವಾಗಿದೆ ಎಂದರು.

ಈ ಕಾರ್ಯಪಡೆ ವೈದ್ಯರ ಸುರಕ್ಷತೆ ಬಗ್ಗೆ ಕೈಗೊಳ್ಳಬೇಕಾದ ಕ್ರಮ, ಕಾನೂನುಗಳ ಅನುಷ್ಠಾನ ಸೇರಿ ಎಲ್ಲ ಆಯಾಮಗಳಲ್ಲಿ ವೈದ್ಯರ ಭದ್ರತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಒಂದು ತಿಂಗಳಲ್ಲಿ ವರದಿ ಪಡೆಯಲು ಸಭೆಯಲ್ಲಿ ನಿರ್ಧರಿಸಲಾಗಿದೆ. ವೈದ್ಯಕೀಯ ಸಂಘಟನೆಯವರು ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಕಾರ್ಯಪಡೆಯಲ್ಲಿರಲಿದ್ದಾರೆ ಎಂದು ತಿಳಿಸಿದರು.

ವೈದ್ಯರ ರಕ್ಷಣೆಗೆ ಅನೇಕ ಕಾನೂನುಗಳು ಇವೆ. ವೈದ್ಯರಿಗೆ ಹಲ್ಲೆ ಮಾಡುವವರಿಗೆ 3-7 ವರ್ಷ ವರೆಗೆ ಶಿಕ್ಷೆ ವಿಧಿಸುವ ತಿದ್ದುಪಡಿ ತರಲಾಗಿದೆ. ಪ್ರಸ್ತುತ ಇದ್ದ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ. ಈ ಬಗ್ಗೆ ನಿನ್ನೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News