×
Ad

ಸಿಎಂ, ಡಿಸಿಎಂ ವಿರುದ್ಧ ಅಪಪ್ರಚಾರ : ನಗರ ಪೊಲೀಸ್ ಆಯುಕ್ತರಿಗೆ ದೂರು

Update: 2024-05-07 19:40 IST

ಬೆಂಗಳೂರು: ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ವಿರುದ್ಧ ಬೆಂಗಳೂರು ನಗರಾದ್ಯಂತ ಅತ್ಯಂತ ಕೆಟ್ಟ ಶಬ್ದಗಳಲ್ಲಿ ಬರೆದಿರುವ ಭಿತ್ತಿಪತ್ರಗಳನ್ನು ಅಂಟಿಸಿ ಅಪಪ್ರಚಾರ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಜಿ.ಪ್ರಕಾಶ್ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಬೆಂಗಳೂರು ನಗರದ ಸುತ್ತಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಭಾವಚಿತ್ರಗಳನ್ನು ಮುದ್ರಿಸಿ ಕೆಟ್ಟ ಶಬ್ದಗಳಲ್ಲಿ ನಿಂದಿಸಿ ಭಾವಚಿತ್ರವನ್ನು ಅಂಟಿಸಿರುವ ಕಿಡಿಗೇಟಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ತನಿಖೆ ನಡೆಸಿ, ಇದರ ಹಿಂದಿರುವ ಕಾರಣ ವ್ಯಕ್ತಿಗಳು ಹಾಗೂ ರಾಜಕೀಯ ಪಕ್ಷದ ನಾಯಕರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಅವರು ಉಲ್ಲೇಖಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News