×
Ad

ರಾಜ್ಯದಲ್ಲಿ ಡೆಂಗ್ಯೂ ಜ್ವರ ಉಲ್ಬಣ: 15 ಸಾವಿರ ಪ್ರಕರಣ ದಾಖಲು

Update: 2024-01-14 20:52 IST

ಸಾಂದರ್ಭಿಕ ಚಿತ್ರ | Photo: NDTV 

ಬೆಂಗಳೂರು: ಹವಾಮಾನ ಬದಲಾವಣೆಯಿಂದಾಗಿ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾದ್ದು, 15 ಸಾವಿರದ ಗಡಿಯತ್ತ ಸಾಗುತ್ತಿದೆ.  ಆರೋಗ್ಯ ಇಲಾಖೆ ಈ ವಿಚಾರದಲ್ಲಿ ಅಲರ್ಟ್ ಆಗಿದೆ.

ರಾಜ್ಯದಲ್ಲಿ ಡೆಂಗ್ಯೂ 14,955 ಪ್ರಕರಣಗಳು ದಾಖಲಾಗಿವೆ. ಒಂದು ತಿಂಗಳ ಅವಧಿಯಲ್ಲಿ 1,829 ಪ್ರಕರಣಗಳು ದೃಢಪಟ್ಟಿವೆ. ಈವರೆಗೆ ರಾಜ್ಯದ 31 ಜಿಲ್ಲೆಗಳಿಂದ 7,282 ಪ್ರಕರಣಗಳು ದೃಢಪಟ್ಟಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 7,673 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ.

ರಾಜ್ಯದಲ್ಲಿ ಈಗಾಗಲೇ ಎರಡು ಲಕ್ಷಕ್ಕೂ ಅಧಿಕ ಡೆಂಗ್ಯೂ ಜ್ವರ ಶಂಕಿತರ ತಪಾಸಣೆ ಮಾಡಲಾಗಿದೆ. ಕಳೆದ ವರ್ಷ ರಾಜ್ಯದಲ್ಲಿ 9,620 ಮಂದಿ ಡೆಂಗ್ಯೂ ಜ್ವರದಿಂದ ಬಳಲಿದ್ದರು. ಅಲ್ಲದೆ ಕಳೆದ ವರ್ಷ ಡೆಂಗ್ಯೂನಿಂದ 9 ಮಂದಿ ಬಲಿಯಾಗಿದ್ದರು . ಈ ವರ್ಷ ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಲ್ಕು ಸೇರಿ ಒಟ್ಟು ಒಂಬತ್ತು ಮಂದಿ ಮೃತಪಟ್ಟಿರುವುದು  ಖಚಿತವಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 52,721 ಡೆಂಗ್ಯು ಶಂಕಿತರನ್ನು ತಪಾಸಣೆ ಮಾಡಲಾಗಿದೆ. ಅವರಲ್ಲಿ 33,326 ಮಂದಿಯ ರಕ್ತದ ಮಾದರಿಯನ್ನು ಪರೀಕ್ಷೆ ಮಾಡಲಾಗಿದೆ. ಕಳೆದ ಒಂದು ತಿಂಗಳಲ್ಲಿ 839 ಮಂದಿಯಲ್ಲಿ ಡೆಂಗ್ಯೂ ದೃಢಪಟ್ಟಿದೆ. ಡೆಂಗ್ಯೂ ಜೊತೆಗೆ 28 ಜಿಲ್ಲೆಗಳಲ್ಲಿ ಚಿಕನ್ ಗುನ್ಯಾ ಪ್ರಕರಣಗಳೂ ಪತ್ತೆಯಾಗಿದೆ. 60 ಸಾವಿರಕ್ಕೂ ಅಧಿಕ ಮಂದಿ ಚಿಕನ್ ಗುನ್ಯಾ ಶಂಕಿತರ ತಪಾಸಣೆ ಮಾಡಲಾಗಿದೆ.

ಸೊಳ್ಳೆಗಳನ್ನು ಆದಷ್ಟು ತಡೆಗಟ್ಟಲು ಸೂಚಿಸಲಾಗಿದೆ. ತೆರೆದ ಪ್ರದೇಶಗಳಲ್ಲಿ ನಿಂತ ನೀರಿನಲ್ಲಿ ಸೊಳ್ಳೆಗಳು ಹುಟ್ಟುತ್ತಿವೆ. ಇವುಗಳನ್ನು ನಿವಾರಿಸಬೇಕು. ಮನೆಗೆ ಹಾಗೂ ರಾತ್ರಿ ಮಲಗುವಾಗ ಸೊಳ್ಳೆ ಪರದೆ ಬಳಸುವುದು, ಮಾಸ್ಕಿಟೋ ರಿಪೆಲ್ಲೆಂಟ್‍ಗಳನ್ನು ಬಳಸಲು ಸೂಚಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News