ಬೆಂಗಳೂರು: ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರಿನ ವಸಂತನಗರದಲ್ಲಿರುವ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ‘ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್-2026’ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಚಾಲನೆ ನೀಡುವ ಸಂದರ್ಭದಲ್ಲಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ತಕ್ಷಣವೇ ಭದ್ರತಾ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಸದ್ಯ ವೈದ್ಯಕೀಯ ತಂಡ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಪರಮೇಶ್ವರ್ ಅವರು ಆಸ್ಪತ್ರೆಗೆ ದಾಖಲಾಗಿರುವ ಮಾಹಿತಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor