×
Ad

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಎಫ್‍ಐಆರ್ ದಾಖಲು

Update: 2024-01-13 20:50 IST

ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ದುಷ್ಕರ್ಮಿಗಳ ಮೇಲೆ ಇಲ್ಲಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಕೆಪಿಸಿಸಿಯ ಕಾನೂನು, ಮಾನವ ಹಕ್ಕುಗಳ ಮತ್ತು ಮಾಹಿತಿ ಹಕ್ಕು ವಿಭಾಗದ ಕಾರ್ಯದರ್ಶಿ ಸಂಜಯ್ ಯಾದವ್ ನೀಡಿರುವ ದೂರಿನನ್ವಯ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ.

‘ಟ್ರೋಲ್ ಕನ್ನಡಿಗ' ಎಂಬ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪೋಟೋವನ್ನು ತಿರುಚಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಲಾಗಿದೆ. ಅಲ್ಲದೇ ಫೇಸ್‍ಬುಕ್‍ನಲ್ಲಿ ಕೃತಿಕಾ ಕೃತಿ ಹೆಸರಿನ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿಯನ್ನು ಉಲ್ಲೇಖಿಸಿ ಅಶ್ಲೀಲವಾಗಿ ನಿಂದಿಸಿ ಅವಹೇಳನ ಮಾಡಲಾಗಿದೆ. ಈ ಸಂಬಂಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News