×
Ad

ರಾಹುಲ್‌ ಗಾಂಧಿ ವಿರುದ್ಧ ಅವಹೇಳನಕಾರಿ ಪೋಸ್ಟ್‌: BJP ಟ್ವಿಟರ್ ಖಾತೆ ವಿರುದ್ಧ ಕಾಂಗ್ರೆಸ್‌ ದೂರು

Update: 2023-10-06 19:57 IST

ಬೆಂಗಳೂರು, ಅ.6: ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಅವರ ಭಾವಚಿತ್ರವನ್ನು ಹಾಕಿ ಅವರ ವಿರುದ್ಧ ಅಪಪ್ರಚಾರವನ್ನು ಮಾಡಿರುವ ಬಿಜೆಪಿ ಅಧಿಕೃತ ಟ್ವಿಟರ್ ಖಾತೆಯನ್ನು ಸ್ಥಗಿತಗೊಳಿಸಿ, ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ನಗರದ ಕೇಂದ್ರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೈ.ಪುಟ್ಟರಾಜು ದೂರು ದಾಖಲಿಸಿದ್ದಾರೆ.

ಬಿಜೆಪಿ ಟ್ವಿಟರ್ ಖಾತೆಯಲ್ಲಿ (@BJP4India) ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಿ ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗಿದೆ. ಅಲ್ಲದೆ, ಧರ್ಮವಿರೋಧಿ, ಶ್ರೀರಾಮನ ವಿರೋಧಿ, ಆಧುನಿಕ ರಾವಣ ಎಂಬೆಲ್ಲಾ ಪದಗಳನ್ನು ಬಳಸಿ ಸುಳ್ಳು ಮಾಹಿತಿಯನ್ನು ಹರಡಲಾಗುತ್ತಿದ್ದು, ಇದು ರಾಹುಲ್‌ಗಾಂಧಿ ಅವರ ಅಭಿಮಾನಿಗಳಿಗೆ ಹಾಗೂ ಪಕ್ಷಕ್ಕೆ ನೋವುಂಟು ಮಾಡಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಬಿಜೆಪಿ ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಕಾರ್ಯಕರ್ತರನ್ನು, ರಾಹುಲ್‌ಗಾಂಧಿ ಅಭಿಮಾನಿಗಳನ್ನು ಕೆರಳಿಸುವಂತೆ ಪ್ರಚೋದನೆ ಮಾಡುತ್ತಿದೆ. ಕೂಡಲೇ ಅವರ ಸಾಮಾಜಿಕ ಜಾಲತಾಣ ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News