×
Ad

ಭಾರೀ ಮಳೆ | ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ದೇವಿಮನೆ ಗುಡ್ಡ ಕುಸಿತ

Update: 2025-05-21 12:20 IST

ಕಾರವಾರ: ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಬುಧವಾರ ದೇವಿಮನೆ ಪ್ರದೇಶದಲ್ಲಿ ಗುಡ್ಡ ಕುಸಿತವಾಗಿದೆ.

ರಾಷ್ಟ್ರೀಯ ಹೆದ್ದಾರಿ 766Eರಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ರಸ್ತೆ ಅಗಲೀಕರಣಕ್ಕಾಗಿ ಪಕ್ಕದ ಬಂಡೆಗಲ್ಲುಗಳನ್ನು ಒಡೆಯಲಾಗಿತ್ತು. ಈಗ ಮಳೆಯ ಪರಿಣಾಮ ಹೆಚ್ಚಾಗಿದ್ದರಿಂದ ಈ ಪ್ರದೇಶದಲ್ಲಿ ಭೂಕುಸಿತವಾಗಿದೆ.

ಕುಸಿತದ ಪರಿಣಾಮ ಬಂಡೆಗಳು ರಸ್ತೆಯ ಮೇಲೆ ಬಿದ್ದಿವೆ. ಕಳೆದ ವರ್ಷವೂ ಈ ಪ್ರದೇಶದಲ್ಲಿ ಕುಸಿತವಾಗಿತ್ತು ಈಗ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಾದರೆ, ಕುಸಿತದ ಭೀತಿಯು  ಮತ್ತಷ್ಟು ಹೆಚ್ಚಾಗಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News