ಧರ್ಮಸ್ಥಳ ಪ್ರಕರಣ : ಗೃಹ ಸಚಿವ ಜಿ.ಪರಮೇಶ್ವರ್ ಭೇಟಿಯಾದ ಎಸ್‍ಐಟಿ ಅಧಿಕಾರಿಗಳು
ಗೃಹ ಸಚಿವ ಪರಮೇಶ್ವರ್ | PC : PTI
ಬೆಂಗಳೂರು, ಆ.13 : ಧರ್ಮಸ್ಥಳ ಪ್ರಕರಣವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಈ ಸಂಬಂಧ ಸದನದಲ್ಲೂ ಪ್ರಸ್ತಾಪಿಸಿ ಮಧ್ಯಂತರ ವರದಿ ನೀಡಬೇಕೆಂದು ಪ್ರತಿಪಕ್ಷ ಸದಸ್ಯರು ಆಗ್ರಹಿಸಿದ ಬೆನ್ನಲ್ಲೇ ಎಸ್‍ಐಟಿ ಅಧಿಕಾರಿಗಳಾದ ಪ್ರಣವ್ ಮೊಹಂತಿ, ಅನುಚೇತ್ ಅವರು ಬುಧವಾರ ವಿಧಾನಸೌಧದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿ ಸುಮಾರು ಅರ್ಧ ಗಂಟೆಗಳ ಕಾಲ ಚರ್ಚೆ ನಡೆಸಿರುವುದಾಗಿ ವರದಿಯಾಗಿದೆ.
ಎಸ್‍ಐಟಿ ಅಧಿಕಾರಿಗಳ ಭೇಟಿ ವೇಳೆ ತನಿಖಾ ಪ್ರಗತಿ ಬಗ್ಗೆ ಗೃಹ ಸಚಿವರು ಮಾಹಿತಿ ಪಡೆದುಕೊಂಡರು. ಅಲ್ಲದೇ, ಶೀಘ್ರವಾಗಿ ತನಿಖೆ ಮುಗಿಸಿ ವರದಿ ನೀಡುವಂತೆ ಸೂಚಿಸಿದರು. ಮುಂದಿನ ತನಿಖೆ ಬಗ್ಗೆ ಎಸ್‍ಐಟಿ ಅಧಿಕಾರಿಗಳ ಸಭೆ ಬಳಿಕ ನಿರ್ಧಾರ ಕೈಗೊಳ್ಳುವ ಬಗ್ಗೆಯೂ ಚರ್ಚೆ ನಡೆಸಲಾಯಿತು ಎಂದು ತಿಳಿದುಬಂದಿದೆ.
ಆ.12ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಈ ಸಭೆಯಲ್ಲಿ ಧರ್ಮಸ್ಥಳ ಪ್ರಕರಣದ ಕುರಿಂತಂತೆ ಚರ್ಚೆಗಳು ನಡೆದಿವೆ. ಈ ಪ್ರಕರಣದಲ್ಲಿ ಯಾರೂ ಭಾವನಾತ್ಮಕವಾಗಿ ಹೇಳಿಕೆ ನೀಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.