×
Ad

ಧಾರವಾಡ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ವಿರುದ್ಧದ ಎಫ್ ಐಆರ್ ರದ್ದು

Update: 2023-08-07 21:12 IST

JP Nadda | Photo : PTI

ಬೆಂಗಳೂರು, ಆ. 7: ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ ಅವರ ವಿರುದ್ಧ ದಾಖಲಿಸಿದ್ದ ಎಫ್‍ಐಆರ್ ಅನ್ನು ಹೈಕೋರ್ಟಿನ ಧಾರವಾಡ ಏಕಸದಸ್ಯ ಪೀಠವು ಎಫ್‍ಐಆರ್ ರದ್ದು ಮಾಡಿದೆ.

ವಿಧಾನಸಭಾ ಚುನಾವಣೆ ವೇಳೆ ವಿಜಯನಗರ ಜಿಲ್ಲೆ ಹರಪನಹಳ್ಳಿ ಠಾಣೆಯಲ್ಲಿ ಮತದಾರರಿಗೆ ಆಮಿಷವೊಡ್ಡಿದ ಆರೋಪದಡಿ ಅವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿತ್ತು. 2023ರ ಮೇ 7ರಂದು ಬಹಿರಂಗ ಸಭೆಯಲ್ಲಿ ಭಾಷಣ ಮಾಡಿದ್ದ ನಡ್ಡಾ ವಿರುದ್ಧ ಪೊಲೀಸರು ಮೇ 11ರಂದು ಸ್ವಯಂ ಪ್ರೇರಿತರಾಗಿ ಎಫ್ಐಆರ್ ದಾಖಲಿಸಿಕೊಂಡಿದ್ದರು.

ಹೈಕೋರ್ಟ್‍ನ ಈ ಕ್ರಮವನ್ನು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ವಾಗತಿಸಿದ್ದಾರೆ. ಇದು ನ್ಯಾಯಕ್ಕೆ ಸಂದ ಜಯ ಎಂದು ಅವರು ತಿಳಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News