×
Ad

ಆಸ್ತಿ ದಾಖಲೆಗಳ ಡಿಜಿಟೈಸೇಷನ್ ವ್ಯವಸ್ಥೆ, ರಸ್ತೆಗಳ ಸ್ಥಿತಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್

Update: 2023-12-01 21:42 IST

ಬೆಂಗಳೂರು: ಸೌತ್ ಎಂಡ್ ಸರ್ಕಲ್‍ನಲ್ಲಿರುವ ಕೆಂಪೇಗೌಡ ನಗರದ ಸಹ ಕಂದಾಯ ಅಧಿಕಾರಿ ಕಚೇರಿಗೆ ಶುಕ್ರವಾರ ಸಂಜೆ ದಿಢೀರ್ ಭೇಟಿ ನೀಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆಸ್ತಿ ದಾಖಲೆಗಳ ಡಿಜಿಟೈಸೇಷನ್ ವ್ಯವಸ್ಥೆ ಪರಿಶೀಲನೆ ನಡೆಸಿದರು. ಸಹ ಕಂದಾಯ ಅಧಿಕಾರಿ ಕಚೇರಿಯಲ್ಲಿ ನಡೆಯುತ್ತಿರುವ ಆಸ್ತಿ ಪುಸ್ತಕಗಳ ಸ್ಕಾನಿಂಗ್ ಅನ್ನು ವೀಕ್ಷಿಸಿ ಮಾಹಿತಿ ಪಡೆದರು.

ಮುಖ್ಯ ಆಯುಕ್ತರು ಪ್ರತಿಕ್ರಿಯಿಸಿ, ‘ರಿಜಸ್ಟರ್ ಪುಸ್ತಕದಲ್ಲಿ ಬರೆದಿರುವುದನ್ನು ಸ್ಕ್ಯಾನಿಂಗ್ ಮಾಡಿ, ಸ್ಕ್ಯಾನಿಂಗ್ ಆಗಿರುವ ಗುಣಮಟ್ಟವನ್ನು ಪರಿಶೀಲಿಸಲಾಗುತ್ತದೆ. ತದನಂತರ ಮಾಹಿತಿಯನ್ನು ಟೈಪ್ ಮಾಡಿ ವೆರಿಫಿಕೇಷನ್ ಮಾಡಿದ ನಂತರ ಸಾಫ್ಟ್ ವೇರ್‌ ನಲ್ಲಿ ಪ್ರತಿಯೊಂದು ಆಸ್ತಿಯನ್ನು ಗಣಕಯಂತ್ರದ ಮೂಲಕ ಡಿಜಿಟೈಸೇಷನ್ ಮಾಡಲಾಗುತ್ತದೆ.

ಇದನ್ನು ಯಾರೂ ನಕಲು ಮಾಡಲು ಸಾಧ್ಯವಿಲ್ಲ. ಒಮ್ಮೆ ಡಿಜಿಟೈಸೇಷನ್ ಮಾಡಿದ ನಂತರ ಆಸ್ತಿ ಖಾತಾವನ್ನು ಆನ್‍ಲೈನ್ ಮೂಲಕ ಎಲ್ಲಿ ಬೇಕಾದರೂ ನೋಡಬಹುದು ಎಂದು ಮಾಹಿತಿ ನೀಡಿದರು. ಪಾಲಿಕೆ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಶಿವಕುಮಾರ್, ನಗರದಾದ್ಯಂತ ತ್ವರಿತಗತಿಯಲ್ಲಿ ಎಲ್ಲ ಆಸ್ತಿಗಳನ್ನು ಡಿಜಿಟೈಸೇಷನ್ ಮಾಡಬೇಕು ಎಂದು ಸೂಚನೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News