×
Ad

ಎಪಿಎಲ್‌ ಕುಟುಂಬಗಳಿಗೂ ʼಕೆಎಫ್‌ಡಿʼ ಉಚಿತ ಚಿಕಿತ್ಸೆ ವಿಸ್ತರಣೆ : ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್

Update: 2025-02-15 13:13 IST

ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು : ಮಲೆನಾಡು ಭಾಗಗಳಲ್ಲಿ ಹೆಚ್ಚು ಕಾಡುತ್ತಿರುವ ಮಂಗನ ಕಾಯಿಲೆ (ಕೆಎಫ್‌ಡಿ) ನಿಯಂತ್ರಣಕ್ಕೆ ನಮ್ಮ ಸರಕಾರ ಸರ್ವ ಪ್ರಯತ್ನಗಳನ್ನು ನಡೆಸುತ್ತಿದೆ. ರೋಗದಿಂದ ಬಾಧಿತರಾದವರಿಗೆ ಚಿಕಿತ್ಸೆ ಉಚಿತವಾಗಿದ್ದು, ಈ ಯೋಜನೆಯನ್ನು ಎಪಿಎಲ್‌ ಕುಟುಂಬಗಳಿಗೂ ವಿಸ್ತರಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ರಾಜ್ಯದಲ್ಲಿ ಕೆಎಫ್‌ಡಿ ಬಾಧಿತ ಎಪಿಎಲ್ ಕುಟುಂಬದ ಸದಸ್ಯರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಅಡಿ ನೋಂದಾಯಿಸಿಕೊಂಡಿರುವ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ದೊರೆಯಲಿದೆ. ಇದರಿಂದ ನೂರಾರು ಕುಟುಂಬಗಳಿಗೆ ಸಹಾಯವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಈಗಾಗಲೇ ಮಂಗನ ಕಾಯಿಲೆ ವಿರುದ್ಧ ನಿರ್ಣಾಯಕ ಹೆಜ್ಜೆಯಿಟ್ಟಿರುವ ನಮ್ಮ ಸರಕಾರ ಐಸಿಎಂಆರ್ ಜೊತೆಗೆ ಚರ್ಚೆ ನಡೆಸಿದ್ದು, ಪ್ರಯೋಗಗಳ ಬಳಿಕ 2026ರ ವೇಳೆಗೆ ಕೆಎಫ್‌ಡಿ ಲಸಿಕೆ ಸಿಗಲಿದೆ. ರಾಜ್ಯದ ಜನರ ಆರೋಗ್ಯ ರಕ್ಷಣೆಗೆ ನಮ್ಮ ಸರಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News