ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸ್ಥಾನ ತ್ಯಾಗಕ್ಕೆ ಮುಂದಾದ ಸಚಿವ ದಿನೇಶ್ ಗುಂಡೂರಾವ್?
Update: 2025-05-29 18:41 IST
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆ ಹಾಗು ಕೋಮು ಹಿಂಸಾಚಾರದ ವಿಚಾರವಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸ್ಥಾನ ತ್ಯಾಗಕ್ಕೆ ಸಚಿವ ದಿನೇಶ್ ಗುಂಡೂರಾವ್ ಮುಂದಾಗಿದ್ದಾರೆ ಎನ್ನಲಾಗಿದೆ.
ಸಿಎಂ ನಿವಾಸ ಕಾವೇರಿಗೆ ತೆರಳಿರುವ ಸಚಿವ ದಿನೇಶ್ ಗುಂಡೂರಾವ್ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ತಮ್ಮನ್ನು ತೆರವು ಮಾಡುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿನಿಂದ ನಡೆಯುತ್ತಿರುವ ಅಹಿತಕರ ಬೆಳವಣಿಗೆಗಳ ಕುರಿತು ಸಿಎಂ ನಿವಾಸ ಕಾವೇರಿಯಲ್ಲಿ ಗೃಹ ಸಚಿವ ಪರಮೇಶ್ವರ್, ಡಿಜಿ ಹಾಗು ಐಜಿಪಿ ಡಾ.ಎಂ.ಎ.ಸಲೀಂ ಉಪಸ್ಥಿತಿಯಲ್ಲಿ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.