×
Ad

ಮಂಡಿನೋವು ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸ್ಚಾರ್ಜ್

Update: 2025-02-02 16:14 IST

 ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಂಡಿನೋವು ಹಿನ್ನಲೆ ನಗರದ ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಸಿದ್ದರಾಮಯ್ಯನವರು ಚಿಕಿತ್ಸೆ ಪಡೆದು ಇದೀಗ ಡಿಸ್ಚಾರ್ಜ್ ಆಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾಗಿದ್ದರು. ತಪಾಸಣೆ ನಡೆಸಿದ ವೈದ್ಯರು ಈ ಹಿಂದೆ ಶಸ್ತ್ರ ಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದ್ದು ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ.

ಸದ್ಯ ಎರಡು ದಿನ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಹೀಗಾಗಿ ಡಿಸ್ಚಾರ್ಜ್ ಬಳಿಕ ಕಾವೇರಿ ನಿವಾಸಕ್ಕೆ ಸಿದ್ದರಾಮಯ್ಯ ತೆರಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News