×
Ad

ಬಿಜೆಪಿಯಲ್ಲಿ ಆಂತರಿಕ ಅಸಮಾಧಾನ ಭುಗಿಲೆದ್ದಿದೆ: ಸಚಿವ ಎಚ್‌.ಕೆ. ಪಾಟೀಲ್

Update: 2023-08-27 15:40 IST

ಹುಬ್ಬಳ್ಳಿ: ಇತ್ತೀಚಿನ ಬೆಳವಣಿಗೆಗಳನ್ನು ನೋಡಿದರೆ ಬಿಜೆಪಿಯಲ್ಲಿ ಆಂತರಿಕವಾಗಿ ಅಸಮಾಧಾನ ಭುಗಿಲೆದ್ದಿದೆ ಎಂದು ಹೇಳಬಹುದು' ಎಂದು ಸಚಿವ ಎಚ್‌.ಕೆ. ಪಾಟೀಲ ಹೇಳಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿ ಮುಖಂಡರು ಡಿ.ಕೆ. ಶಿವಕುಮಾರ್ ಅವರ ಬಳಿ ಬರುತ್ತಿರುವುದನ್ನು, ಹೋಗುತ್ತಿರುವುದನ್ನು ನೋಡಿದರೆ ಅಸಮಾಧಾನ ಭುಗಿಲೆದ್ದಿರುವುದು ಗೊತ್ತಾಗುತ್ತದೆ. ಕೋವಿಡ್ ಸಂಕಷ್ಟದ ಕಾಲದಲ್ಲಿ ಜನರು ರಸ್ತೆಯಲ್ಲಿ ಸಾಯುತ್ತಿರುವಾಗ ಭ್ರಷ್ಟಾಚಾರ ಮಾಡಿದ್ದಾರೆ ಎಂದರೆ ಅವರ ಮನಸ್ಥಿತಿ ಯಾವ ಮಟ್ಟದಲ್ಲಿತ್ತು ಎನ್ನುವುದನ್ನು ಊಹಿಸಿಕೊಳ್ಳಬೇಕು. ತನಿಖೆಯಾಗಲಿ, ಕಾರಣರಾದವರಿಗೆ ತಕ್ಕ ಶಾಸ್ತಿಯಾಗಲಿ ಎಂದರು.

ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ನಮ್ಮ ನಿಲುವನ್ನು ಈಗಾಗಲೇ ಸುಪ್ರೀಂ ಕೋರ್ಟ್‌ ಗೆ ತಿಳಿಸಿದ್ದೇವೆ. 2-3 ದಿನಗಳಲ್ಲಿ ವಿಚಾರಣೆ ಕೈಗೆತ್ತಿಕೊಳ್ಳಬಹುದು. ಸಂಕಷ್ಟ ಸೂತ್ರ ರಚನೆಯಾಗಬೇಕು ಎನ್ನುವುದು ನಮ್ಮ ಬೇಡಿಕೆ.ಸೆಪ್ಟೆಂಬರ್ ವೇಳೆಗೆ ರಾಜ್ಯದ ಪ್ರವಾಸೋದ್ಯಮ ನೀತಿಗೆ ಅಂತಿಮ ರೂಪ ಕೊಡಲಾಗುವುದು ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News