×
Ad

'ಕರ್ನಾಟಕ ಬಂದ್'ಗೆ ಶಿವಮೊಗ್ಗದಲ್ಲಿ ನೀರಸ ಪ್ರತಿಕ್ರಿಯೆ

Update: 2023-09-29 09:41 IST

ಶಿವಮೊಗ್ಗ: ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಶಿವಮೊಗ್ಗದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.ಎಂದಿನಂತೆ ಬಸ್-ಆಟೋಗಳು ರಸ್ತೆಗಿಳಿದಿವೆ.

ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಮುಂಭಾಗ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು, ಮುಖಂಡರು ಪ್ರತಿಭಟನೆ ಮಾಡಿದರು. ತಮಿಳುನಾಡಿಗೆ ನೀರು ಹರಿಸದಂತೆ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಕನ್ನಡಪರ ಸಂಘಟನೆಗಳ ಮುಖಂಡರನ್ನು ವಶಕ್ಕೆ ಪಡೆದುಕೊಂಡರು.

ಇಂದು ಬೆಳಗ್ಗೆಯಿಂದಲೆ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ಸುಗಳು ರಸ್ತೆಗಿಳಿದಿವೆ. ಆಟೋ, ಟ್ರ್ಯಾಕ್ಸ್‌ ಎಂದಿನಂತೆ ಸಂಚರಿಸುತ್ತಿವೆ. ಅಂಗಡಿಗಳ ಬಾಗಿಲು ತೆಗೆಯಲಾಗುತ್ತಿದೆ. ಮಾರುಕಟ್ಟೆಗಳಲ್ಲಿ ವ್ಯಾಪಾರ ನಡೆಯುತ್ತಿದೆ.

ಇನ್ನು, ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಸರ್ಕಾರಿ ಮತ್ತು ಖಾಸಗಿ ಕಚೇರಿಗಳು ಎಂದಿನಂತೆ ಕರ್ತವ್ಯ ನಿರ್ವಹಿಸಲಿವೆ.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News