×
Ad

ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ಬಿಜೆಪಿ ನಾಯಕ ಬಿ. ಶ್ರೀರಾಮುಲು

Update: 2023-11-20 12:26 IST

Photo - Twitter@DKShivakumar 

ಬೆಂಗಳೂರು: ಮಾಜಿ ಸಚಿವ ಮತ್ತು ಬಿಜೆಪಿ ಮಾಜಿ ಶಾಸಕ ಬಿ. ಶ್ರೀರಾಮುಲು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಸೋಮವಾರ ಭೇಟಿಯಾಗಿದ್ದಾರೆ. 

ಡಿ.ಕೆ. ಶಿವಕುಮಾರ್ ಅವರನ್ನು ಅವರ ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿದ  ಶ್ರೀರಾಮುಲು, ಇದಕ್ಕೂ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಹ ಭೇಟಿ ಮಾಡಿದ್ದಾರೆ. 

ಕಳೆದ ಕೆಲ ತಿಂಗಳುಗಳಿಂದ ಹಲವು ಮಂದಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡುತ್ತಿದ್ದು, ಈ ನಡುವೆಯೇ ಶ್ರೀರಾಮುಲು ಅವರು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಆದರೆ, ಶ್ರೀರಾಮುಲು ಅವರು ತಮ್ಮ ಮಗಳ ಮದುವೆಯ ಅಮಂತ್ರಣ ಪತ್ರಿಕೆಯನ್ನು ನೀಡಲು ತಮ್ಮ ನಿವಾಸಕ್ಕೆ ಆಗಮಿಸಿರುವುದಾಗಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಡಿಕೆ ಶಿವಕುಮಾರ್ ಬರೆದುಕೊಂಡಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News