×
Ad

ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್, ಮಾಜಿ ಸಂಸದ ಶಿವರಾಮೇಗೌಡ

Update: 2023-09-06 23:38 IST

ಬೆಂಗಳೂರು: ‘ಆಪರೇಷನ್ ಹಸ್ತ’ದ ಚರ್ಚೆಯ ಬೆನ್ನಲ್ಲೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ, ಬಿಜೆಪಿಯ ಹಾಲಿ ಶಾಸಕ ಶಿವರಾಂ ಹೆಬ್ಬಾರ್‌ ಹಾಗೂ ಮಂಡ್ಯದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬುಧವಾರ ಭೇಟಿ ಮಾಡಿ ಕುತೂಹಲ ಮೂಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಿವರಾಮೇಗೌಡ, ʼʼನಾನು ಆಪರೇಷನ್‌ ಹಸ್ತದಿಂ ದೂರ ಇದ್ದೇನೆ. ಡಿ.ಕೆ. ಶಿವಕುಮಾರ್ ನನ್ನ ಸಂಬಂಧಿಕರು. ಈಗ ಅವರನ್ನು ಭೇಟಿ ಮಾಡಿ ಕಷ್ಟ ಸುಖ ಮಾತನಾಡಿ ಬಂದಿದ್ದೇನೆ ಅಷ್ಟೇ. ರಾಜಕೀಯ ವಿಚಾರ ಚರ್ಚಿಸಿಲ್ಲʼʼ ಎಂದು ತಿಳಿಸಿದರು. 

ಈ ಹಿಂದೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‍ನಲ್ಲಿದ್ದ ಎಲ್.ಆರ್.ಶಿವರಾಮೇಗೌಡರು ಶಾಸಕರಾಗಿ ಹಾಗೂ ಒಂದು ಬಾರಿ ಮಂಡ್ಯ ಲೋಕಸಭಾ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು.  ಮಂಡ್ಯದ ಮಾಜಿ ಸಂಸದ ದಿವಂಗತ ಜಿ. ಮಾದೇಗೌಡರ ವಿರುದ್ಧ ಲಘುವಾಗಿ ಮಾತನಾಡಿದರೆಂಬ ಕಾರಣಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಶಿವರಾಮೇಗೌಡ ಅವರನ್ನು ಪಕ್ಷದಿಂದ ಉಚ್ಚಾಟನೆಗೊಳಿಸಿದ್ದರು. ಬಳಿಕ ಬಿಜೆಪಿ ಪಕ್ಷ ಸೇರಿದ್ದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News