ಭಾರತೀಯ ಯೋಧರಿಗೆ ಬೆಂಬಲ ಸೂಚಿಸಲು ‘ತಿರಂಗಾ ಯಾತ್ರೆʼ : ಡಿ.ಕೆ.ಶಿವಕುಮಾರ್
Update: 2025-05-08 18:49 IST
ಡಿ.ಕೆ.ಶಿವಕುಮಾರ್
ಬೆಂಗಳೂರು : ಪಹಲ್ಗಾಮ್ ನರಮೇಧಕ್ಕೆ ಪ್ರತೀಕಾರವಾಗಿ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸಲು ಮೇ 9ರಂದು (ಶುಕ್ರವಾರ) ಬೆಳಗ್ಗೆ 9.30 ರಿಂದ 10.30 ರವರೆಗೆ ಬೆಂಗಳೂರಿನ ಕೆ.ಆರ್.ವೃತ್ತದಿಂದ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಬಳಿ ಇರುವ ಮಿನ್ಸ್ ಸ್ಕ್ವೇರ್ ವರೆಗೆ ‘ತಿರಂಗಾ ಯಾತ್ರೆ' ಹಮ್ಮಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಈ ಯಾತ್ರೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು, ಸರಕಾರಿ, ಖಾಸಗಿ ಉದ್ದಿಮೆಗಳ ನೌಕರರು, ಸಾಹಿತಿಗಳು, ಚಿಂತಕರು, ಚಿತ್ರರಂಗದವರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಸರ್ವರೂ ಭಾಗವಹಿಸಲು ಮುಕ್ತ ಆಹ್ವಾನ ನೀಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.