×
Ad

ಮಾಜಿ ಯೋಧರಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸಲು ಚಿಂತನೆ : ಡಿ.ಕೆ.ಶಿವಕುಮಾರ್

Update: 2025-05-28 18:10 IST

ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜ್ಯದ ಎಲ್ಲ ಮಾಜಿ ಯೋಧರಿಗೆ ನೆರವಾಗಲು ಪ್ರತ್ಯೇಕ ನಿಗಮ(ಕಾರ್ಪೊರೇಷನ್) ಸ್ಥಾಪಿಸಲು ಚಿಂತನೆ ನಡೆಸಲಾಗಿದ್ದು, ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬುಧವಾರ ನಗರದ ಟೌನ್ ಹಾಲ್‍ನಲ್ಲಿ ನಡೆದ ‘ಜೈ ಹಿಂದ್ ಸಭಾ’ ಕಾರ್ಯಕ್ರಮದಲ್ಲಿ ಹಿರಿಯ ಸೇನಾಧಿಕಾರಿಗಳು, ಮಾಜಿ ಯೋಧರು ಹಾಗೂ ಹುತಾತ್ಮರಾದ ಯೋಧರ ಕುಟುಂಬ ಸದಸ್ಯರನ್ನು ಸನ್ಮಾನಿಸಿದ ಬಳಿಕ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷದ ಸೈನಿಕರ ವಿಭಾಗದ ಅಧ್ಯಕ್ಷ ಮಲ್ಲಿಕಾರ್ಜುನ ಅವರ ಸಲಹೆ ಮೇರೆಗೆ ಕಾರ್ಪೊರೇಷನ್ ರಚಿಸಲು ಆಲೋಚಿಸುತ್ತಿದ್ದೇವೆ. ನಮ್ಮ ದೇಶಕ್ಕೆ ಸೇವೆ ಸಲ್ಲಿಸಿರುವ ಯೋಧರ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಇಂತಹ ಮಹತ್ವದ ಕಾರ್ಯಕ್ರಮದ ಭಾಗವಾಗಿರುವುದು ಹೆಮ್ಮೆಯ ವಿಚಾರ. ದೇಶಕ್ಕೆ ಶಕ್ತಿ ತುಂಬಿರುವ ಯೋಧರಿಗೆ ದೇಶ ಹಾಗೂ ಕಾಂಗ್ರೆಸ್ ಪಕ್ಷದ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಕಾಂಗ್ರೆಸ್ ಪಕ್ಷ ಸದಾ ದೇಶ ಹಾಗೂ ನಮ್ಮ ಸಶಸ್ತ್ರ ಪಡೆಗಳ ಪರವಾಗಿ ನಿಲ್ಲಲಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News