ಜು.25ರಂದು ನಾನು, ಮುಖ್ಯಮಂತ್ರಿ ಹೊಸದಿಲ್ಲಿಗೆ ಭೇಟಿ : ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್
ಬೆಂಗಳೂರು : ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ನಾಮ ನಿರ್ದೇಶನ ಹಾಗೂ ನಿಗಮ, ಮಂಡಳಿಗಳಿಗೆ ಕಾರ್ಯಕರ್ತರನ್ನು ನೇಮಕ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲು ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜು.25ರಂದು ಹೊಸದಿಲ್ಲಿಗೆ ತೆರಳುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಸೋಮವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸತ್ ಅಧಿವೇಶನ ನಡೆಯುತ್ತಿರುವುದರಿಂದ ನಾವೇ ಹೊಸದಿಲ್ಲಿಗೆ ತೆರಳಿ, ಈ ವಿಷಯಗಳ ಕುರಿತು ಚರ್ಚೆ ನಡೆಸುತ್ತೇವೆ ಎಂದು ಹೇಳಿದರು.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಐಟಿ ರಚನೆ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಈ ವಿಚಾರವಾಗಿ ಪರ ವಿರೋಧ ಚರ್ಚೆ ಆಗುತ್ತಿದೆ. ಇದನ್ನು ಗೃಹ ಸಚಿವರು ನಿಭಾಯಿಸುತ್ತಿದ್ದು, ಬಹಳ ಹಿರಿಯ ಅಧಿಕಾರಿಗಳನ್ನು ಎಸ್‍ಐಟಿ ತಂಡದಲ್ಲಿ ನಿಯೋಜಿಸಿದ್ದಾರೆ. ತನಿಖೆ ನಂತರ ಸತ್ಯಾಸತ್ಯತೆ ತಿಳಿಯುತ್ತದೆ ಎಂದರು.