×
Ad

ʼಮತಗಳ್ಳತನʼ ಆರೋಪ | ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿ.ಕೆ.ಶಿವಕುಮಾರ್

Update: 2025-08-06 20:58 IST

ಡಿ.ಕೆ.ಶಿವಕುಮಾರ್

ಬೆಂಗಳೂರು : ಮತಗಳ್ಳತನ ವಿಚಾರವನ್ನು ನಮ್ಮ ಹೈಕಮಾಂಡ್ ನಾಯಕರು ಗಂಭೀರವಾಗಿ ಪರಿಗಣಿಸಿದ್ದು, ಮತದಾರರ ಹಕ್ಕಿನ ರಕ್ಷಣೆ ಮಾಡಬೇಕಾಗಿರುವುದು ರಾಜಕೀಯ ಪಕ್ಷಗಳ ಕರ್ತವ್ಯ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬುಧವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಮೈತ್ರಿ ನಾಯಕ ಶಿಬು ಸೊರೇನ್ ಅವರ ನಿಧನವಾದ ಕಾರಣಕ್ಕೆ ಆ.5ರಂದು ನಡೆಸಬೇಕಾಗಿದ್ದ ಪ್ರತಿಭಟನೆಯನ್ನು ಆ.8ಕ್ಕೆ ಮುಂದೂಡಲಾಯಿತು ಎಂದು ಹೇಳಿದರು.

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆ.8ರಂದು ಬೆಳಗ್ಗೆ 10.30ಕ್ಕೆ ಆಗಮಿಸಲಿದ್ದು, ಚುನಾವಣೆ ಸಮಯದಲ್ಲಿ ಆಗಿರುವ ಅಕ್ರಮಗಳ ಬಗ್ಗೆ ದಾಖಲೆಗಳ ಸಮೇತ ಆಯೋಗಕ್ಕೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡುತ್ತೇವೆ ಎಂದು ಶಿವಕುಮಾರ್ ತಿಳಿಸಿದರು.

ಚುನಾವಣಾ ಆಯೋಗಕ್ಕೆ ಯಾವ ದಾಖಲೆಗಳನ್ನು ನೀಡುತ್ತೀರಿ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರವನ್ನು ನಾನು ಬಹಿರಂಗಪಡಿಸುವುದಿಲ್ಲ. ಇದು ರಾಷ್ಟ್ರೀಯ ವಿಚಾರ ಆಗಿರುವ ಹಿನ್ನೆಲೆಯಲ್ಲಿ ನಮ್ಮ ನಾಯಕರು ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದರು.

ಪ್ರತಿಭಟನೆ ಬಳಿಕ ಮೆರವಣಿಗೆ ನಡೆಯಲಿದೆಯೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಸ್ವಾತಂತ್ರ್ಯ ಉದ್ಯಾನದಲ್ಲಿ ಕಾನೂನು ಚೌಕಟ್ಟಿನಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News