×
Ad

ಬಳ್ಳಾರಿ ಗುಂಪು ಘರ್ಷಣೆ | ಸಿಐಡಿ/ಎಸ್‍ಐಟಿಗೆ ವಹಿಸುವ ಬಗ್ಗೆ ಸಿಎಂ-ಗೃಹ ಸಚಿವರು ತೀರ್ಮಾನಿಸುತ್ತಾರೆ : ಡಿ.ಕೆ.ಶಿವಕುಮಾರ್

Update: 2026-01-04 20:24 IST

ಬೆಂಗಳೂರು : ‘ಶಾಸಕ ಗಾಲಿ ಜನಾರ್ದನ ರೆಡ್ಡಿ ಝಡ್ ಶ್ರೇಣಿಯ ಭದ್ರತೆಯಾದರೂ ಕೇಳಲಿ, ಇರಾನ್, ಅಮೆರಿಕಾದಿಂದಾದರೂ ಭದ್ರತೆ ತೆಗೆದುಕೊಂಡು ಬರಲಿ. ಇವರು ಯಾರನ್ನಾದರೂ ನೇಮಿಸಿಕೊಳ್ಳಲಿ, ಬೇಡ ಎಂದವರು ಯಾರು’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಲೇವಡಿ ಮಾಡಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಬಳ್ಳಾರಿ ಗಲಭೆ ಬಗ್ಗೆ ಎಚ್.ಎಂ.ರೇವಣ್ಣ ಅವರು ಒಳ್ಳೆಯ ಮಾಹಿತಿಗಳನ್ನು ಪಡೆದುಕೊಂಡು ಬಂದಿದ್ದಾರೆ. ಕೆಲ ಅಧಿಕೃತ ಹಾಗೂ ಅನಧಿಕೃತ ವಿಚಾರಗಳನ್ನು ಭೇಟಿ ಮಾಡಿ ಮಾಹಿತಿ ನೀಡಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವಾಲ್ಮೀಕಿ ಎಲ್ಲರಿಗೂ ಸೇರಿದವರು: ಎಲ್ಲ ಕಡೆಯೂ ಪ್ರತಿಮೆಗಳನ್ನು ಇಡುತ್ತಾರೆ. ಇದಕ್ಕೆ ಅಸೂಯೆ ಏಕೆ? ಮಹರ್ಷಿ ವಾಲ್ಮೀಕಿಯವರು ಒಂದು ಸಮುದಾಯಕ್ಕೆ ಸೇರಿದವರಲ್ಲ, ಬದಲಿಗೆ ಎಲ್ಲ ಸಮುದಾಯದ ಆಸ್ತಿ. ಅವರು ಬರೆದಿರುವ ರಾಮಯಣವನ್ನು ಎಲ್ಲರೂ ಓದುವುದಿಲ್ಲವೇ?. ಹೀಗಿರುವಾಗ ಅವರ ಬ್ಯಾನರ್ ಹಾಕಲು ಜನಾರ್ಧನ ರೆಡ್ಡಿ ಆಕ್ಷೇಪ ವ್ಯಕ್ತಪಡಿಸಿದ್ದು ಸರಿಯಲ್ಲ ಎಂದು ಆಕ್ಷೇಪಿಸಿದರು.

ಜನಾರ್ದನ ರೆಡ್ಡಿ ರಕ್ಷಣೆಗೆ ಬಿಜೆಪಿ ಪಕ್ಷದ ನೂರು ಮಂದಿ ಕಾರ್ಯಕರ್ತರನ್ನು ಅವರು ತಯಾರಿ ಮಾಡಿಕೊಳ್ಳಲಿ. ಬಳ್ಳಾರಿ ಗಲಭೆಯ ತನಿಖೆಯನ್ನು ಸಿಐಡಿ ಅಥವಾ ಎಸ್‍ಐಟಿಗೆ ವಹಿಸುವ ಬಗ್ಗೆ ಸಿಎಂ ಹಾಗೂ ಗೃಹ ಸಚಿವರು ತೀರ್ಮಾನ ಮಾಡುತ್ತಾರೆ. ಈ ಬಗ್ಗೆ ಯಾವ ಚರ್ಚೆಯೂ ನನಗೆ ಗೊತ್ತಿಲ್ಲ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News