ಕಾಂಗ್ರೆಸ್ ಕಚೇರಿ ಬಳಿ ಮೊಟ್ಟೆ ಹೊಡೆದಿದ್ದನ್ನು ಸರಿ ಎಂದು ಹೇಳುವುದಿಲ್ಲ; ಕಾನೂನಿನ ಪ್ರಕಾರ ಕ್ರಮ : ಡಿ.ಕೆ.ಶಿವಕುಮಾರ್

Update: 2026-07-23 18:27 IST

ಬೆಂಗಳೂರು : ಕಾಂಗ್ರೆಸ್ ಕಚೇರಿ ಬಳಿ ಮೊಟ್ಟೆ ಎಸೆತ ಸರಿ ಎಂದು ಹೇಳುವುದಿಲ್ಲ. ಆದರೆ, ಬಿಜೆಪಿಯವರು ಹಿಂದೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಶಾಲೆಯ ಆವರಣದಲ್ಲಿ ಬಂದೂಕು (ರೈಫಲ್) ತರಬೇತಿ ನೀಡಿದ್ದು ನಮಗೂ ನೆನಪಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬಿಜೆಪಿ ಮುಖಂಡರಿಗೆ ತಿರುಗೇಟು ನೀಡಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೂ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ ಮಾಡಿದ್ದೇವೆ. ಮಂಗಳವಾರದಂದು ಕಾಂಗ್ರೆಸ್ ಕಚೇರಿ ಬಳಿ ಮೊಟ್ಟೆ ಹೊಡೆದಿದ್ದನ್ನು ಸರಿ ಎಂದು ಹೇಳುವುದಿಲ್ಲ. ಕಾನೂನಿನ ಪ್ರಕಾರ ಯಾವ ಕ್ರಮ ತೆಗೆದುಕೊಳ್ಳಲಾಗುವುದು ಎಂದು ನಮ್ಮ ಗೃಹಸಚಿವರು ಈಗಾಗಲೇ ತಿಳಿಸಿದ್ದಾರೆ ಎಂದರು.

ಬಿಜೆಪಿಯವರು ಈ ಹಿಂದೆ ಏನೇನು ಮಾಡಿದ್ದರು ಎಂದು ಅವರೂ ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಲಾಠಿ, ಮಚ್ಚು, ರೈಫಲ್‍ಗಳು ಸಿಕ್ಕಿದ್ದವು. ಪೊನ್ನಂಪೇಟೆಯ ಶಾಲೆಯ ಆವರಣದಲ್ಲಿ ರೈಫಲ್ ತರಬೇತಿ ನೀಡಿದ್ದರು. ನಿಮ್ಮದೂ ಇತಿಹಾಸಗಳಿವೆ ಎಂದು ಅವರು ಟೀಕಿಸಿದರು.

‘ರಾಜ್ಯದಲ್ಲಿ ಕೊತ್ವಾಲ್ ಆಡಳಿತ ನಡೆಯುತ್ತಿದೆ’ ಎನ್ನುವ ಬಿಜೆಪಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಅವರ ಖುಷಿಗೆ ಏನು ಬೇಕಾದರೂ, ಹೇಗೆ ಬೇಕಾದರೂ ಮಾತನಾಡಿಕೊಳ್ಳಲಿ. ನಾನು ಈ ಸ್ಥಾನಕ್ಕೆ ಬರಲು ವಿದ್ಯಾರ್ಥಿ ನಾಯಕನಾಗಿ ಬೆಳೆದವನು. ಹಳ್ಳಿಯಲ್ಲಿ ಹುಟ್ಟಿದ ನಾನು ಪರಿಶುದ್ಧವಾದ ರಾಜಕಾರಣ, ಆಡಳಿತ ಮಾಡುತ್ತಿದ್ದೇನೆ. ಇದನ್ನು ಅವರ ಕೈಯಲ್ಲಿ ತಡೆದುಕೊಳ್ಳಲು ಆಗುತ್ತಿಲ್ಲ ಎಂದರೆ ಏನು ಮಾಡಲು ಆಗುವುದಿಲ್ಲ’ ಎಂದು ವ್ಯಂಗ್ಯವಾಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News