ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್
ಸಿದ್ದರಾಮಯ್ಯ ಅವರನ್ನು ತಬ್ಬಿಕೊಂಡು, ಕಾಲಿಗೆರಗಿದ ಡಿ ಕೆ ಶಿವಕುಮಾರ್
Update: 2026-05-28 10:58 IST
ಸಿಎಂ ಸಿದ್ದರಾಮಯ್ಯ , ಡಿ ಕೆ ಶಿವಕುಮಾರ್
ಬೆಂಗಳೂರು, ಮೇ 25: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕೃತ ನಿವಾಸ ಕಾವೇರಿಯಲ್ಲಿ ಬ್ರೇಕ್ ಫಾಸ್ಟ್ ಸಭೆಯ ವೇಳೆ ಸಿದ್ದರಾಮಯ್ಯ ಅವರನ್ನು ತಬ್ಬಿಕೊಂಡು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕಾಲಿಗೆರಗಿದ ಕ್ಷಣಕ್ಕೆ ಸಾಕ್ಷಿಯಾಗಿಯಿತು.
ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆಯ ಕುರಿತು ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಸಿದ್ದರಾಮಯ್ಯ ಅವರು ಇಂದು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳುತ್ತಿದ್ದು, ಆದರೆ ಅಧಿಕೃತವಾಗಿ ಯಾವುದೇ ಘೋಷಣೆ ಆಗಿಲ್ಲ. ಸಿಎಂ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆಯುತ್ತಿರುವ ಉಪಹಾರ ಸಭೆಯ ಬಳಿಕ ಈ ಬಗ್ಗೆ ಸಿದ್ದರಾಮಯ್ಯ ಅವರೇ ಅಧಿಕೃತ ಹೇಳಿಕೆ ನೀಡುವ ಸಾಧ್ಯತೆಯಿದೆ.