×
Ad

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿ ಅವರನ್ನು ಭೇಟಿಯಾದ ಡಿ.ಕೆ.ಶಿವಕುಮಾರ್

Update: 2025-11-21 20:11 IST

ವೀರೇಂದ್ರ ಪಪ್ಪಿ/ಡಿ.ಕೆ.ಶಿವಕುಮಾರ್‌/ವಿನಯ್‌ ಕುಲಕರ್ಣಿ

ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಶಾಸಕರಾದ ವಿನಯ್ ಕುಲಕರ್ಣಿ ಹಾಗೂ ವೀರೇಂದ್ರ ಪಪ್ಪಿ ಅವರನ್ನು ಭೇಟಿ ಮಾಡಿ ಧೈರ್ಯ ತುಂಬಿದರು.

ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಹತ್ಯೆ ಪ್ರಕರಣವೊಂದಲ್ಲಿ ಜೈಲು ಸೇರಿದ್ದು, ಚಿತ್ರದುರ್ಗ ಕ್ಷೇತ್ರದ ಶಾಸಕ ವೀರೇಂದ್ರ ಪಪ್ಪಿ ಅವರು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಲ್ಲಿನ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಾಗಿದ್ದಾರೆ.

ಶುಕ್ರವಾರ ಸಂಜೆ 4.30ರ ಸುಮಾರಿಗೆ ಏಕಾಏಕಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಖುದ್ದು ಭೇಟಿ ನೀಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮೊದಲಿಗೆ ವೀರೇಂದ್ರ ಪಪ್ಪಿ ಅವರನ್ನು ಭೇಟಿ ಮಾಡಿ ಸಮಾಧಾನ ಹೇಳಿದರು. ಅನಂತರ ಕೋರ್ಟ್ ವಿಚಾರಣೆ ಮುಗಿಸಿ ಬಂದ ಶಾಸಕ ವಿನಯ್ ಕುಲಕರ್ಣಿ ಅವರನ್ನು ಭೇಟಿಯಾಗಿ ಸಂತೈಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News