×
Ad

ರಾಜ್ಯದಲ್ಲಿ ಏನೇ ನಡೆದರೂ ನಾವೇ ಹೊಣೆಯೇ?: ಡಿ.ಕೆ. ಶಿವಕುಮಾರ್

Update: 2024-12-20 21:45 IST

ಡಿಸಿಎಂ ಡಿ.ಕೆ. ಶಿವಕುಮಾರ್ 

ಬೆಂಗಳೂರು: ಈ ರಾಜ್ಯದಲ್ಲಿ ಏನೇ ನಡೆದರೂ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣವೇ? ಎಲ್ಲದಕ್ಕೂ ನಾನೇ ಹೊಣೆಯೇ? ಸಿ.ಟಿ.ರವಿ ವಿಚಾರದಲ್ಲಿ ಯಾವುದೇ ರೀತಿಯ ಸರಕಾರದ ಹಸ್ತಕ್ಷೇಪವಿಲ್ಲ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಶುಕ್ರವಾರ ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ‘ಸಿ.ಟಿ.ರವಿ ಮೇಲೆ ಪೊಲೀಸ್ ಕ್ರಮ ತೆಗೆದುಕೊಳ್ಳುವ ವೇಳೆ ಡಿ.ಕೆ.ಶಿವಕುಮಾರ್ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಭಾವ ಬೀರಿದ್ದಾರೆ ಎನ್ನುವ ಬಿಜೆಪಿಯವರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಕ್ರಮ ತೆಗೆದುಕೊಳ್ಳಲು ಪೊಲೀಸರಿದ್ದಾರೆ, ಕಾನೂನಿದೆ ಎಂದು ಹೇಳಿದರು.

ಸಿ.ಟಿ. ರವಿ ವಿರುದ್ದ ಪೊಲೀಸರು ಯಾವ, ಯಾವ ಸೆಕ್ಷನ್‍ಗಳ ಅಡಿಯಲ್ಲಿ ಕೇಸನ್ನು ಹಾಕಿದ್ದಾರೆ ಎಂಬುದು ನಮಗೆ ತಿಳಿದಿಲ್ಲ. ಇದರಲ್ಲಿ ನಮ್ಮ ಯಾವ ಹಸ್ತಕ್ಷೇಪವೂ ಇಲ್ಲ. ಅವರುಂಟು, ಕಾನೂನು ಹಾಗೂ ಪೊಲೀಸರುಂಟು ಎಂದು ಅವರು ತಿಳಿಸಿದರು.

ಕೋರ್ಟ್‍ನಿಂದ ಜಾಮೀನು ಸಿಕ್ಕಿರುವುದು ಮೊದಲ ಗೆಲುವು ಎಂದು ಸಿ.ಟಿ.ರವಿ ಹೇಳಿದ್ದಾರೆ. ಆದರೆ ತಾಯಿಗೆ, ಹೆಣ್ಣು ಕುಲಕ್ಕೆ, ನಮ್ಮ ಸಂಸ್ಕೃತಿಗೆ ಆಗಿರುವ ಅವಮಾನದ ಬಗ್ಗೆ ಮೊದಲು ಉತ್ತರ ನೀಡಲಿ ಎಂದು ಶಿವಕುಮಾರ್ ತಿರುಗೇಟು ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News