×
Ad

ಡಿಕೆ ಶಿವಕುಮಾರ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು: ಕೆ ಎಸ್‌ ಈಶ್ವರಪ್ಪ

Update: 2023-11-25 13:52 IST

ಹಾವೇರಿ: ರಾಜ್ಯ ಸಚಿವ ಸಂಪುಟ ಡಿಕೆಶಿ ವಿರುದ್ಧದ ಪ್ರಕರಣ ಹಿಂಪಡೆಯುವ ನಿರ್ಧಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಡಿಕೆ ಶಿವಕುಮಾರ್ ಅಕ್ರಮ ಹಣ ಸಂಪಾದನೆ ಮಾಡಿದ್ದಾರೆ. ಆದ್ದರಿಂದ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಹಾವೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ʻರಾಜ್ಯ ಸರಕಾರದ ಡಿಕೆಶಿ ವಿರುದ್ಧದ ಪ್ರಕರಣ ಹಿಂಪಡೆಯುವ ನಿರ್ಧಾರದಿಂದ ರಾಜ್ಯ ಸಚಿವ ಸಂಪುಟದ ಪಾವಿತ್ರ್ಯತೆ ಧಕ್ಕೆಯಾಗಿದೆʻಎಂದು ಅವರು ಸರಕಾರದ ನಿರ್ಧಾರವನ್ನು ಟೀಕಿಸಿದರು.

ಮುಖ್ಯಮಂತ್ರಿಗಳು ಹೈಕಮಾಂಡ್ ನಾಯಕರ ಒತ್ತಡದಿಂದ ಡಿಕೆಶಿ ವಿರುದ್ಧದ ಪ್ರಕರಣ ಹಿಂಪಡೆಯುವ ನಿರ್ಧಾರ ಮಾಡಿದ್ದಾರೆ.  ಇದು ಸಿದ್ದರಾಮಯ್ಯನವರ ರಾಜಕೀಯ ಜೀವನದಲ್ಲಿ ಕಪ್ಪುಚುಕ್ಕೆ ಯಾಗಿರಲಿದೆ ಎಂದು ಹೇಳಿದರು. ಸಿಎಂ ಸ್ಥಾನ ಉಳಿಸಿಕೊಳ್ಳಬೇಕೆಂಬ ಒಂದೇ ಉದ್ದೇಶದಿಂದ ಈ ರೀತಿ ಮಾಡಿದ್ದಾರೆ. ಸಚಿವ ಸಂಪುಟ ನಿರ್ಧಾರ ಹಿಂಪೆಡೆಯದಿದ್ದರೆ ರಾಜ್ಯದಾದ್ಯಂತ ಬಿಜೆಪಿ ಹೋರಾಟ ಮಾಡಲಿದೆ ಎಂದು ಕೆ ಎಸ್‌ ಈಶ್ವರಪ್ಪ ರಾಜ್ಯ ಸರಕಾರಕ್ಕೆ ಎಚ್ಚರಿಸಿದರು.

ಜಾತಿ ಜನಗಣತಿ ಬಗ್ಗೆ ಸಿದ್ದರಾಮಯ್ಯನವರಿಗೆ ಆಸಕ್ತಿ ಇಲ್ಲ. ಕೇವಲ ಹಿಂದುಳಿದ ವರ್ಗದ ಚಾಂಪಿಯನ್ ಎನಿಸಿಕೊಳ್ಳಲು ಜನರ 160 ಕೋಟಿ ರೂ. ವ್ಯಯ ಮಾಡಿದ್ದಾರೆ ಎಂದು ಹೇಳಿದರು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News