×
Ad

ಶ್ರೀರಂಗಪಟ್ಟಣ | ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿ.ಕೆ.ಶಿವಕುಮಾರ್‌ರ ಬೆಂಗಾವಲು ವಾಹನ ಪಲ್ಟಿ: ನಾಲ್ವರಿಗೆ ಗಾಯ

Update: 2025-07-19 16:57 IST

ಮಂಡ್ಯ : ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶದ ಕಾರ್ಯಕ್ರಮ ಮುಗಿಸಿ ವಾಪಸ್​​ ಬೆಂಗಳೂರಿಗೆ ಬರುತ್ತಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬೆಂಗಾವಲು ವಾಹನ ಪಲ್ಟಿಯಾಗಿದೆ.

ಶ್ರೀರಂಗಪಟ್ಟಣ ತಾಲ್ಲೂಕಿನ ಟಿ.ಎಂ. ಹೊಸೂರು ಗೇಟ್ ಬಳಿ ಶನಿವಾರ ಘಟನೆ ನಡೆದಿದೆ. ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ ಎನ್ನಲಾಗಿದೆ.

ಬೆಂಗಾವಲು ವಾಹನ ಪಲ್ಟಿಯಾಗಿ ಅದರಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಸದ್ಯ ಅವರನ್ನು  ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News