×
Ad

ಸಿಎಂ ಸಿದ್ದರಾಮಯ್ಯ ಸಮರ್ಥರಿದ್ದು, ಕೊಟ್ಟ ಭರವಸೆಗಳನ್ನು ಈಡೇರಿಸಲಿದ್ದಾರೆ : ಡಿ.ಕೆ.ಸುರೇಶ್

Update: 2026-05-18 18:23 IST

ಬೆಂಗಳೂರು : ಕಾಂಗ್ರೆಸ್ ಸರಕಾರಕ್ಕೆ ಮೂರು ವರ್ಷ ತುಂಬಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮರ್ಥರಿದ್ದು, ಕೊಟ್ಟ ಭರವಸೆಗಳನ್ನು ಈಡೇರಿಸಲಿದ್ದಾರೆ. ಗ್ಯಾರಂಟಿಗಳು ಸೇರಿದಂತೆ ಎಲ್ಲ ಭರವಸೆಗಳನ್ನು ಈಡೇರಿಸುವ ಶಕ್ತಿ ಹಾಗೂ ಅಗಾಧ ಅನುಭವ ಅವರಿಗೆ ಇದೆ ಎಂದು ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ಪ್ರತಿಕ್ರಿಯಿಸಿದ್ದಾರೆ.

ಸೋಮವಾರ ನಗರದಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(ಎಸ್‍ಐಆರ್) ಬಗ್ಗೆ ಕಾಂಗ್ರೆಸ್ ಪಕ್ಷ ಮತದಾರರನ್ನ ಉಳಿಸಿಕೊಳ್ಳಲಿಕ್ಕೆ ಬೇಕಾದಂತ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಬಂಗಾಳದಲ್ಲಿ ಎಸ್‍ಐಆರ್‍ನಿಂದ ಆದ ಸ್ಥಿತಿ ರಾಜ್ಯದಲ್ಲಿಯೂ ಆಗಬಹುದು. ಹೀಗಾಗಿಯೇ ನಾವು ನಮ್ಮ ಪಕ್ಷದ ಕಾರ್ಯಕರ್ತರಿಗೆ ಕರೆ ಕೊಡುತ್ತಿದ್ದೇವೆ ಎಂದರು.

ರಾಜ್ಯದ ಎಲ್ಲ ಕಡೆಗಳಲ್ಲಿ ನಾವು ಪಕ್ಷದ ವತಿಯಿಂದ ಸಭೆಗಳನ್ನು ಮಾಡುತ್ತಿದ್ದೇವೆ. ಎಸ್‍ಐಆರ್ ಸಂಬಂಧ ಪಕ್ಷದಿಂದ ಯಾವ ರೀತಿ ಎಚ್ಚರಿಕೆ ವಹಿಸಬೇಕೆಂದು ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರಿಗೆ ತಿಳಿಸುತ್ತಿದ್ದೇವೆ. ಆತುರದ ತೀರ್ಮಾನಗಳನ್ನು ಕೈಗೊಳ್ಳದೆ, ಅರ್ಹ ಮತದಾರರು ಪಟ್ಟಿಯಿಂದ ಕೈಬಿಟ್ಟು ಹೋಗದಂತೆ ಎಚ್ಚರ ವಹಿಸಬೇಕಿದೆ ಎಂದು ಸುರೇಶ್ ತಿಳಿಸಿದರು.

  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News