ಡಿ.ಕೆ.ಶಿವಕುಮಾರ್ ಸಂಪುಟ: 19 ಶಾಸಕರಿಂದ ಪ್ರಮಾಣವಚನ ಸ್ವೀಕಾರ; ವಿವರ ಇಲ್ಲಿದೆ....
ಬೆಂಗಳೂರು : ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಕಾರ್ಯಕ್ರಮವು ಲೋಕಭನದ ಗಾಜಿನ ಮನೆಯಲ್ಲಿ ಇಂದು(ಸೋಮವಾರ) ನೆರವೇರಿತು.
ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು 19 ಶಾಸಕರಿಗೆ ಸಚಿವರಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ನೂತನ ಸಚಿವರುಗಳಾಗಿ, ಪಿ.ಎಂ.ನರೇಂದ್ರಸ್ವಾಮಿ, ಶಿವರಾಜ್ ತಂಗಡಗಿ, ರುದ್ರಪ್ಪ ಲಮಾಣಿ, ಕೆ. ಎಸ್. ಬಸವಂತಪ್ಪ, ಬಿ. ನಾಗೇಂದ್ರ, ಟಿ. ರಘುಮೂರ್ತಿ, ಬಿ. ಝಡ್. ಝಮೀರ್ ಅಹಮದ್ ಖಾನ್, ರಿಝ್ವಾನ್ ಅರ್ಷದ್, ಸಂತೋಷ್ ಲಾಡ್, ಮಧು ಬಂಗಾರಪ್ಪ, ಪುಟ್ಟರಂಗಶೆಟ್ಟಿ, ಎಸ್. ಎಸ್. ಮಲ್ಲಿಕಾರ್ಜುನ್, ಡಾ. ಅಜಯ್ ಸಿಂಗ್, ಎನ್. ಚಲುವರಾಯ ಸ್ವಾಮಿ, ಕೆ. ಎಂ. ಶಿವಲಿಂಗೇಗೌಡ, ಹೆಚ್. ಸಿ. ಬಾಲಕೃಷ್ಣ, ಬಸವರಾಜ್ ರಾಯರೆಡ್ಡಿ, ವಿಜಯಾನಂದ ಕಾಶಪ್ಪನವರ್ ಮತ್ತು ಲಕ್ಷ್ಮಣ ಸವದಿ ಅವರು ಗೌಪ್ಯತಾ ಪ್ರಮಾಣ ವಚನ ಸ್ವೀಕರಿಸಿದರು.
ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಬಿ.ಕೆ.ಹರಿಪ್ರಸಾದ್, ಸೇರಿದಂತೆ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಹಿರಿಯ ನಾಯಕರು ಹಾಗೂ ವಿವಿಧ ಇಲಾಖೆಯ ಉನ್ನತಾಧಿಕಾರಿಗಳು ಉಪಸ್ಥಿತರಿದ್ದರು.