×
Ad

ಬಿಜೆಪಿ ವಿರುದ್ಧ ಹೋರಾಡುವ ಮನಸ್ಸು ಎಚ್‍ಡಿಕೆಗೆ ಇದಿಯೇ?: ಡಿ.ಕೆ.ಶಿವಕುಮಾರ್

Update: 2023-07-17 22:08 IST

ಬೆಂಗಳೂರು, ಜು.17: ‘ಬಿಜೆಪಿ ವಿರುದ್ಧ ಹೋರಾಡುವ ಮನಸ್ಸು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಇದಿಯೇ? ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕುಮಾರಸ್ವಾಮಿಗೆ ನಿಜವಾಗಿಯೂ ಬಿಜೆಪಿ ವಿರುದ್ಧ ಹೋರಾಡುವ ಮನಸ್ಸಿದ್ದರೆ ಆ ಕುರಿತಂತೆ ಅಜೆಂಡಾದಲ್ಲಿ ಚರ್ಚೆ ನಡೆಸುತ್ತೇವೆ.ಅಲ್ಲದೆ, ಸರ್ವಾಧಿಕಾರಿ ಧೋರಣೆ ವಿರೋಧಿಸುವ ಯಾರು ಬೇಕಾದರೂ ನಮ್ಮ ಕೈ ಜೋಡಿಸಬಹುದು’ ಎಂದು ಹೇಳಿದರು.

''ದೇಶದ ಭವಿಷ್ಯವನ್ನು ಹೇಗೆ ರೂಪಿಸಬೇಕು ಎಂಬುದರ ಬಗ್ಗೆ ನಾಳೆ ದೊಡ್ಡ ಮಟ್ಟದ ಸಭೆ ನಡೆಯಲಿದೆ. ಇದು ಕೇವಲ ಒಂದು ಪಕ್ಷದ ಸಭೆಯಲ್ಲ, ದೇಶದ 140 ಕೋಟಿ ಜನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಪರಿಹಾರ ನೀಡಲು ಈ ಸಭೆಯಲ್ಲಿ ಚರ್ಚೆ ಮಾಡಲಾಗುವುದು'' ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News